ETV Bharat / bharat

ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ; 2 ವಾರದಲ್ಲಿ ಇದು 4ನೇ ಘಟನೆ

ತಮಿಳುನಾಡಿನಲ್ಲಿ 11ನೇ ತರಗತಿ​ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ರಾಜ್ಯದಲ್ಲಿ ಕಳೆದೆರಡು ವಾರದಲ್ಲಿ ನಡೆದ 4ನೇ ಪ್ರಕರಣವಾಗಿದೆ. ಮಕ್ಕಳ ಸಾವು ಪೋಷಕರ ಆತಂಕಕ್ಕೆ ಕಾರಣವಾಗಿದೆ.

another-student-commits-suicide
ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ
author img

By

Published : Jul 27, 2022, 9:05 AM IST

ಚೆನ್ನೈ: ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರ ಸಾವಿನ ಸರಣಿ ಮುಂದುವರಿದಿದೆ. ನಿನ್ನೆ ಶಿವಕಾಶಿಯ ತನ್ನ ಮನೆಯಲ್ಲಿ 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಕಳೆದ 2 ವಾರಗಳಲ್ಲಿ ನಡೆದ 4ನೇ ಘಟನೆಯಾಗಿದೆ.

ಶಿವಕಾಶಿಯ ನಿವಾಸಿಯಾದ ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಯಾವುದೇ ಆತ್ಮಹತ್ಯೆ ಪತ್ರ ಸ್ಥಳದಲ್ಲಿ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ 4 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲ್ಲಕುರಿಚಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಹಾಸ್ಟೆಲ್​ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾರಿ ವಿಧ್ವಂಸಕ್ಕೆ ಕಾರಣವಾಗಿತ್ತು. ಉದ್ರಿಕ್ತರು ಕಾಲೇಜಿನ ವಾಹನಗಳನ್ನು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು.

ನಿನ್ನೆಯಷ್ಟೇ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿಯ ವಿದ್ಯಾರ್ಥಿನಿಯ ಶವವಾಗಿ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಶಿವಕಾಶಿಯಲ್ಲಿ ಈ ಘಟನೆ ನಡೆದಿದೆ. ಕಡಲೂರು ವಿದ್ಯಾರ್ಥಿನಿ ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಸೂಸೈಡ್ ನೋಟ್‌ ಬರೆದಿಟ್ಟಿದ್ದು ಅದರಲ್ಲಿ, ಹೆತ್ತವರು ತನ್ನ ಮೇಲೆ ಇಟ್ಟಿರುವ ಐಎಎಸ್ ಆಗುವ ಆಕಾಂಕ್ಷೆಯನ್ನು ಪೂರೈಸಲು ಸಾಧ್ಯವಾಗದ ಕಾರಣ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಳು.

ಇದನ್ನೂ ಓದಿ: ಬಿಜೆಪಿ ಯುವ ಮುಖಂಡನ ಬರ್ಬರ ಕೊಲೆ: ಸುಳ್ಯ, ಕಡಬ, ಪುತ್ತೂರು ತಾಲೂಕು ಬಂದ್‌ಗೆ ಕರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.