ಮುಂಬೈ/ಮಹಾರಾಷ್ಟ್ರ: ಆ್ಯಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸುಖ್ ಹಿರೇನ್ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಸುನಿಲ್ ಮಾನೆ ಅವರನ್ನು ಅಮಾನತುಗೊಳಿಸಲಾಗಿದೆ.
ಆ್ಯಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸುನಿಲ್ ಮಾನೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿತ್ತು. ಅಪರಾಧ ವಿಭಾಗದ ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿದ್ದ ಸುನಿಲ್ ಮಾನೆ ಪ್ರಸ್ತುತ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ರು.