ETV Bharat / bharat

ಆರೋಗ್ಯ ಕ್ಷೇತ್ರಕ್ಕೆ ಜಗನ್​ ಒತ್ತು: 100 ಕೋಟಿ ರೂ. ಹೂಡಿಕೆಗೆ ಮುಂದಾದ್ರೆ 5 ಎಕರೆ ಭೂಮಿ ಉಚಿತ

ಆಂಧ್ರ ಪ್ರದೇಶದಲ್ಲಿ ವೈದ್ಯಕೀಯ ಕ್ಷೇತ್ರದ ಅಭಿವೃದ್ದಿಗೆ ರಾಜ್ಯ ಸರ್ಕಾರ ಬೃಹತ್ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ಕಾರ್ಪೊರೇಟ್ ವೈದ್ಯಕೀಯ ಸಂಸ್ಥೆಗಳಿಗೆ ಹೂಡಿಕೆ ಮಾಡಲು ಆಹ್ವಾನಿಸಿದೆ.

AP Health Hub
ಆಂಧ್ರ ಪ್ರದೇಶ ಹೆಲ್ತ್ ಹಬ್
author img

By

Published : May 29, 2021, 9:09 AM IST

Updated : May 29, 2021, 9:27 AM IST

ವಿಜಯವಾಡ : ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರಲು ಆಂಧ್ರ ಪ್ರದೇಶ ಸರ್ಕಾರ ಯೋಜನೆ ರೂಪಿಸಿದ್ದು, 16 ಹೆಲ್ತ್ ಹಬ್​ಗಳನ್ನು ಸ್ಥಾಪಿಸಲು ಮುಂದಾಗಿದೆ.

ರಾಜ್ಯದ ಜನರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಿಕೊಡುವುದು ಮತ್ತು ಪ್ರಮುಖ ಖಾಸಗಿ ಆಸ್ಪತ್ರೆಗಳನ್ನು ರಾಜ್ಯಕ್ಕೆ ಆಕರ್ಷಿಸುವ ಉದ್ದೇಶವನ್ನು ಈ ಯೋಜನೆಯಿಂದ ಹೊಂದಲಾಗಿದೆ. ಇದಕ್ಕಾಗಿ ರಾಜ್ಯಾದ್ಯಂತ ಕಾರ್ಪೊರೇಟ್ ಆಸ್ಪತ್ರೆಗಳನ್ನು ನಿರ್ಮಿಸಲು ಮುಂದೆ ಬಂದವರಿಗೆ 5 ಎಕರೆ ಜಾಗವನ್ನು ಉಚಿತವಾಗಿ ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.

ಓದಿ : Rafale: ಫ್ರಾನ್ಸ್‌ನಿಂದ ಭಾರತಕ್ಕೆ ಬಂದ ಆರನೇ ಬ್ಯಾಚ್​ ರಫೇಲ್ ಯುದ್ಧ ವಿಮಾನಗಳು

ಕೋವಿಡ್ ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ನಮ್ಮ ರಾಜ್ಯದ ಜನತೆ ಉತ್ತಮ ವೈದ್ಯಕೀಯ ಸೌಲಭ್ಯಗಳಿಗಾಗಿ ಹೈದರಾಬಾದ್, ಬೆಂಗಳೂರು, ಚೆನ್ನೈ ಮುಂತಾದ ನಗರಗಳನ್ನು ಆಶ್ರಯಿಸಿದ್ದಾರೆ. ಇದನ್ನು ತಪ್ಪಿಸಿ, ಆಂಧ್ರದ ಜನತೆಗೆ ಇಲ್ಲಿಯೇ ಉತ್ತಮ ವೈದ್ಯಕೀಯ ಸೌಲಭ್ಯ ದೊರಕಿಸಿಕೊಡುವ ಯೋಜನೆಯನ್ನು ರೂಪಿಸಲಾಗಿದೆ. ಇದಕ್ಕಾಗಿ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹೆಲ್ತ್ ಹಬ್​ಗಳನ್ನು ಸ್ಥಾಪಿಸಲು ಖಾಸಗಿ ವೈದ್ಯಕೀಯ ಸಂಸ್ಥೆಗನ್ನು ಆಹ್ವಾನಿಸುತ್ತಿದ್ದೇವೆ. ಯಾರು ವೈದ್ಯಕೀಯ ಕ್ಷೇತ್ರದಲ್ಲಿ ಕನಿಷ್ಠ 100 ಕೋಟಿ ರೂಪಾಯಿ ಹೂಡಿಕೆ ಮಾಡಲು ತಯಾರಿದ್ದಾರೋ, ಅವರಿಗೆ 5 ಎಕರೆ ಭೂಮಿಯನ್ನು ಸರ್ಕಾರದ ವತಿಯಿಂದ ಉಚಿತವಾಗಿ ನೀಡಲಾಗುವುದು ಎಂದಿದ್ದಾರೆ.

Last Updated : May 29, 2021, 9:27 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.