ವಿಜಯನಗರಂ, ಆಂಧ್ರಪ್ರದೇಶ : ಗರ್ಲ್ಫ್ರೆಂಡ್ನೊಂದಿಗೆ ಕಳೆದಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿದ ಆರೋಪದಲ್ಲಿ ಯುವಕನೋರ್ವನನ್ನು ಆಂಧ್ರಪ್ರದೇಶದ ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ಯುವಕ ಗ್ರಾಮ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದು, ಅದೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಎಎಸ್ಪಿ ಪಿ.ಅನಿಲ್ ಕುಮಾರ್ ಈ ಕುರಿತು ಹೇಳಿಕೆ ನೀಡಿದ್ದು, ಶಿರೆಡ್ಡಿ ನವೀನ್ (24) ಬಂಧಿತ ಆರೋಪಿಯಾಗಿದ್ದಾನೆ.
ಗ್ರಾಮ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ ಆತ ಅಲ್ಲೇ ಕೆಲಸ ಮಾಡುವ ಯುವತಿಯೊಂದಿಗೆ ಸಂಬಂಧ ಹೊಂದಿದ್ದನು. ನವೀನ್ ಮತ್ತು ಮಹಿಳೆ ಎರಡು ವರ್ಷಗಳಿಂದ ಸಂಬಂಧ ಹೊಂದಿದ್ದು, ಇದೇ ವೇಳೆ ಇಬ್ಬರೂ ಜೊತೆ ಜೊತೆಯಾಗಿ ಫೋಟೋಗಳನ್ನು ತೆಗೆಸಿಕೊಂಡಿದ್ದರು. ಅವರಿಬ್ಬರೂ ಒಂದೇ ಸಮುದಾಯಕ್ಕೆ ಸೇರಿದ ಕಾರಣ ಮನೆಯವರಿಂದಲೂ ಮದುವೆಗೆ ಒಪ್ಪಿಗೆ ಸಿಕ್ಕಿತ್ತು.
ಕಳೆದ ಎರಡು ತಿಂಗಳಿನಿಂದ ನವೀನ್ ಹಾಗೂ ಮಹಿಳೆ ನಡುವೆ ಜಗಳ ನಡೆಯುತ್ತಿತ್ತು. ಮನೆ ಕಟ್ಟಿಸಿಕೊಟ್ಟರೆ, ಮದುವೆಯಾಗುವುದಾಗಿ ನವೀನ್ ಹೇಳುತ್ತಿದ್ದನು. ಮನೆ ಕಟ್ಟಿಸಲು ಯುವತಿಯ ಪೋಷಕರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದನು. ಯುವತಿಯ ಪೋಷಕರು ಇದಕ್ಕೆ ಒಪ್ಪಿರಲಿಲ್ಲ.
ಈ ವೇಳೆ ನವೀನ್ ಯುವತಿಯೊಂದಿಗಿನ ಕೆಲವು ಫೋಟೋಗಳನ್ನ ಆಕೆಯ ತಂದೆಗೆ ಕಳುಹಿಸಿದ್ದಾನೆ. ಅಷ್ಟೇ ಅಲ್ಲ, ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಮಹಿಳೆ ಮತ್ತು ಆಕೆಯ ಪೋಷಕರಿಗೆ ಬೆದರಿಕೆ ಹಾಕಿದ್ದಾನೆ. ಈ ಕಾರಣಕ್ಕಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ದೂರಿನ ಆಧಾರದ ಮೇಲೆ ನವೀನ್‌ನನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ವಿಡಿಯೋ : ರಾಷ್ಟ್ರರಾಜಧಾನಿಯಲ್ಲಿ ಗುಂಡಿನ ದಾಳಿ, ಇಬ್ಬರಿಗೆ ಗಾಯ