ETV Bharat / bharat

ಎಸ್​ಬಿಐನಲ್ಲಿ 868 ಬ್ಯುಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗೆ ಅರ್ಜಿ ಆಹ್ವಾನ - ಕರ್ನಾಟಕ ಸೇರಿದಂತೆ ದೇಶಾದ್ಯಂತ ಒಟ್ಟು

ಎಸ್​ಬಿಐನ ಆರ್ಥಿಕ ಸೇರ್ಪಡೆ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನ ಮಾಡಲಾಗಿದೆ.

Application Invitation for 868 Business Correspondent Facilitator Posts in SBI

author img

By

Published : Mar 11, 2023, 10:41 AM IST

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ (ಎಸ್​ಬಿಐ) ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶಾದ್ಯಂತ ಒಟ್ಟು 868 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲಾಗುವುದು. ಒಂದು ವರ್ಷದಿಂದ ಮೂರು ವರ್ಷದವರೆಗೆ ಈ ಹುದ್ದೆ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆಗೊಂಡ ಅಭ್ಯರ್ಥಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಎಸ್​​ಬಿಐನಲ್ಲಿ ಈಗಾಗಲೇ ಕೆಲಸ ಮಾಡಿ ನಿವೃತ್ತಿ ಹೊಂದಿರುವ ಅಧಿಕಾರಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ವಿವರ, ಅರ್ಜಿ ಸಲ್ಲಿಕೆ ಮಾಹಿತಿ, ವೇತನ ಸೇರಿದಂತೆ ಇನ್ನಿತರ ಮಾಹಿತಿ ಹೀಗಿದೆ.

ಹುದ್ದೆ ಅಧಿಸೂಚನೆ
ಹುದ್ದೆ ಅಧಿಸೂಚನೆ

ಹುದ್ದೆ ವಿವರ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಆರ್ಥಿಕ ಸೇರ್ಪಡೆ ಇಲಾಖೆ (ಎಫ್​ಐ) ಖಾಲಿ ಇರುವ ಬ್ಯುಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್​ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 32 ಹುದ್ದೆಗಳು ಖಾಲಿ ಇದ್ದು, ದೇಶಾದ್ಯಂತ 868 ಹುದ್ದೆ ಭರ್ತಿ ನಡೆಸಲಾಗುವುದು.

ವಿದ್ಯಾರ್ಹತೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ನಿಯಮಾನುಸಾರ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರತಕ್ಕದ್ದು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಾನ ಮಾರ್ಚ್​ 10ಕ್ಕೆ 65 ವರ್ಷ ಮೀರಿರಬಾರದು. ಪ.ಜಾ, ಪ.ಪಂ, ಪ್ರವರ್ಗ 1 ಸೇರಿದಂತೆ ಉಳಿದ ವರ್ಗಗಳಿಗೆ ಎಸ್​ಬಿಐ ಅನುಸಾರ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಎಸ್​ಬಿಐನಲ್ಲಿ 30 ವರ್ಷ ಸೇವಾ ನಿಯಮ ಪಾಲನೆ ಮಾಡಿರಬೇಕು.

ವೇತನ: ಎಸ್​ಬಿಐ ನಿಯಮ ಅನುಸಾರ ಅಭ್ಯರ್ಥಿಗಳಿಗೆ ಮಾಸಿಕ 40 ಸಾವಿರ ವೇತನವನ್ನು ನಿಗದಿ ಮಾಡಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಶಾರ್ಟ್​ ಲಿಸ್ಟ್​ ಮಾಡಿ ಬಳಿಕ ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುವುದು. ನಂತರ ಮೆರಿಟ್​ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್​ಬಿಐ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಲ್ಲಿ ಅಧಿಸೂಚನೆಯನ್ನು ಮತ್ತೊಮ್ಮೆ ಪರಿಶೀಲಿಸಿ, ಸೂಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕವೇ ಅಗತ್ಯ ದಾಖಲೆಗಳ ಮಾಹಿತಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಈಗಾಗಲೇ ಎಸ್​ಬಿಐನಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಬ್ಯಾಂಕ್​ ನೌಕರರ ಕಾರ್ಯ ನಿರ್ವಹಣೆ ಅವಧಿಯಲ್ಲಿ ಈ ಅಭ್ಯರ್ಥಿಗಳು ಕೂಡ ಕಾರ್ಯ ನಿರ್ವಹಿಸಲಿದ್ದಾರೆ.

ಈ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಮಾರ್ಚ್​ 31 ಆಗಿದೆ.

ಈ ಹುದ್ದೆ ಸಂಬಂಧಿಸಿದ ಸಂಪೂರ್ಣ ವಿವರ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ವೀಕ್ಷಿಸಲು ಅಭ್ಯರ್ಥಿಗಳು ಎಸ್​ಬಿಐ ಅಧಿಕೃತ ಜಾಲತಾಣವಾದ sbi.co.in ಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಕರ್ನಾಟಕ ಹೈ ಕೋರ್ಟ್​ ನೇಮಕಾತಿ: ಡ್ರೈವರ್​ ಹುದ್ದೆಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.