ಗಯಾ(ಬಿಹಾರ): ಬಿಹಾರದ ಗಯಾ ಜಿಲ್ಲೆಯ ಬಾಗ್ದಾಹ ಗ್ರಾಮದಲ್ಲಿ ಸೇನಾ ವಿಮಾನವೊಂದು ಪತನಗೊಂಡಿದ್ದು, ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಾರತೀಯ ಸೇನಾ ಅಧಿಕಾರಿಗಳ ತರಬೇತಿ ಅಕಾಡೆಮಿ ವಿಮಾನವೊಂದು ಸೇನಾ ತರಬೇತಿಯ ವೇಳೆ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ವಿಮಾನ ಟೇಕ್ಆಫ್ ಆಗುತ್ತಿದ್ದಂತೆ ಅದರಲ್ಲಿ ತಾಂತ್ರಿಕ ದೋಷಗಳು ಕಂಡು ಬಂದಿದ್ದು, ತಕ್ಷಣವೇ ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಪತನಗೊಂಡಿದೆ.
ಸೇನಾ ವಿಮಾನದಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ಪೈಲಟ್‌ಗಳು ಸುರಕ್ಷಿತರಾಗಿದ್ದಾರೆ ಎಂದು ಗಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಬಂಗಜೀತ್ ಸಾಹಾ ತಿಳಿಸಿದ್ದಾರೆ.
ವಿಮಾನ ಕೆಳಕ್ಕೆ ಬೀಳುತ್ತಿರುವುದನ್ನ ಗಮನಿಸಿರುವ ಗ್ರಾಮಸ್ಥರು ತಕ್ಷಣವೇ ಸ್ಥಳಕ್ಕೆ ದಾವಿಸಿ, ಪೈಲಟ್ಗಳನ್ನ ಹೊರಗೆ ತೆಗೆದಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಕಳೆದ ಕೆಲ ತಿಂಗಳ ಹಿಂದೆ ತಮಿಳುನಾಡಿನ ನೀಲಗಿರಿ ಪ್ರದೇಶದಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನದ ವೇಳೆ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 13 ಸಿಬ್ಬಂದಿ ಹುತಾತ್ಮರಾಗಿದ್ದರು.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ