ನವದೆಹಲಿ : ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ (Army Chief General MM Naravane) ಅವರು ಭಾನುವಾರ ಇಸ್ರೇಲ್‌ಗೆ ತೆರಳಿದ್ದು, ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ಇನ್ನಷ್ಟು ಬಲಪಡಿಸುವ ವಿಚಾರದ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ಇತ್ತೀಚೆಗಷ್ಟೇ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S Jaishankar) ಮತ್ತು ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ (Defence Secretary Ajay Kumar) ಇಸ್ರೇಲ್‌ಗೆ ತೆರಳಿ ಕೆಲ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದರು.
ಇದರ ಬೆನ್ನಲ್ಲೇ ಎಂಎಂ ನರವಾಣೆ ಇಸ್ರೇಲ್‌ಗೆ ಐದು ದಿನಗಳ ಭೇಟಿ ನೀಡಲಿದ್ದಾರೆ. ಆಗಸ್ಟ್‌ನಲ್ಲಿ ಆಗಿನ ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್ ಬದೌರಿಯಾ (RKS Bhadauria) ಕೂಡ ಇಸ್ರೇಲ್‌ಗೆ ಪ್ರಯಾಣ ಬೆಳೆಸಿದ್ದರು.
ಜನರಲ್ ಎಂಎಂ ನರವಾನೆ ಇಸ್ರೇಲ್‌ಗೆ ಐದು ದಿನಗಳ ಭೇಟಿ ನೀಡಲಿದ್ದಾರೆ. ಈ ಭೇಟಿಯು ಎರಡೂ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ಭಾರತೀಯ ಸೇನೆ ಟ್ವೀಟ್‌ನಲ್ಲಿ ತಿಳಿಸಿದೆ.
ಉಭಯ ದೇಶಗಳ ನಡುವೆ ಒಟ್ಟಾರೆ ಮಿಲಿಟರಿ ಸಹಕಾರವನ್ನು ಹೆಚ್ಚಿಸುವ ಕುರಿತು ಇಸ್ರೇಲ್ನ ಮಿಲಿಟರಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಭಾರತ ಮತ್ತು ಇಸ್ರೇಲ್ ಮುಂದಿನ ಪೀಳಿಗೆಯ ತಂತ್ರಜ್ಞಾನಗಳು (next-generation technology) ಮತ್ತು ಡ್ರೋನ್‌ಗಳು, ರೊಬೊಟಿಕ್ಸ್, ಕೃತಕ ಬುದ್ಧಿಮತ್ತೆ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಂತಹ ಉತ್ಪನ್ನಗಳನ್ನು ಜಂಟಿಯಾಗಿ ಅಭಿವೃದ್ಧಿಪಡಿಸಲು ಒಪ್ಪಂದ ನಡೆದಿದೆ.
ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರನ್ನು ನೇಣಿಗೇರಿಸಿದ ನಕ್ಸಲರು.. ಪೊಲೀಸರಿಗೆ ಮಾಹಿತಿ ನೀಡಿದ್ದಕ್ಕೆ ಪ್ರತೀಕಾರ!