ಕಥುವಾ(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದ್ದು, ಇಬ್ಬರು ಪೈಲಟ್ಗಳು ಸುರಕ್ಷಿತವಾಗಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದುಬಂದಿದೆ.
ಪಠಾಣ್ಕೋಟ್ನಿಂದ ವೆಪನ್ ಸಿಸ್ಟಮ್ ಇಂಟಿಗ್ರೇಟೆಡ್ ಹೆಲಿಕಾಪ್ಟರ್ ಬೆಳಗ್ಗೆ 10:20 ಕ್ಕೆ ಟೇಕಾಫ್ ಆಗಿದೆ. ರಂಜಿತ್ ಸಾಗರ್ ಡ್ಯಾಂ ಪ್ರದೇಶದಲ್ಲಿ ಹೆಲಿಕಾಪ್ಟರ್ ಹೋಗುತ್ತಿದ್ದಾಗ ಅವಘಡ ಸಂಭವಿಸಿತ್ತು.
ಈ ವರ್ಷದ ಆರಂಭದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಜಮ್ಮುಕಾಶ್ಮೀರ- ಪಂಜಾಬ್ ಗಡಿಯಲ್ಲಿ ಪತನಗೊಂಡು ಓರ್ವ ಪೈಲಟ್ ಮೃತಪಟ್ಟಿದ್ದರು.