ETV Bharat / bharat

Nagaland Firing : ಘಟನೆಗೆ ಸೇನೆ ವಿಷಾದ, ನ್ಯಾಯಾಲಯ ತನಿಖೆಗೆ ಆದೇಶ

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ನಾಗರಿಕರ ಹತ್ಯೆಗೆ ಕಾರಣವಾದ ದುರದೃಷ್ಟಕರ ಘಟನೆ ಅತ್ಯಂತ ಖಂಡನೀಯವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ..

Army orders Court of Inquiry into killing of civilians in anti-insurgency operation in Nagaland
Nagaland Firing: ಘಟನೆಗೆ ಸೇನೆ ವಿಷಾದ, ನ್ಯಾಯಾಲಯ ತನಿಖೆಗೆ ಆದೇಶ
author img

By

Published : Dec 5, 2021, 12:36 PM IST

ಕೋಹಿಮಾ, ನಾಗಾಲ್ಯಾಂಡ್‌ : ಮೋನ್ ಜಿಲ್ಲೆಯಲ್ಲಿ ನಡೆದ 13 ನಾಗರಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇನೆಯು ನ್ಯಾಯಾಲಯ ವಿಚಾರಣೆಗೆ ಭಾನುವಾರ ಆದೇಶಿಸಿದೆ. ತನಿಖೆಯ ಫಲಿತಾಂಶಗಳ ಆಧಾರದ ಮೇಲೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದೆ.

ನ್ಯಾಷನಲ್ ಸೋಶಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ ಸಂಘಟನೆಯ ಉಗ್ರರೆಂದು ತಪ್ಪಾಗಿ ಭಾವಿಸಿ, ಫೈರಿಂಗ್ ಮಾಡಲಾಗಿತ್ತು ಎಂದು ನ್ಯಾಗಾಲ್ಯಾಂಡ್ ಪೊಲೀಸರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ದಂಗೆಕೋರರ ಚಲನವಲನದ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಸೇನೆಯೂ ಹೇಳಿಕೆ ನೀಡಿದೆ.

ಘಟನೆ ದುರದೃಷ್ಟಕರ, ಅತ್ಯಂತ ಖಂಡನೀಯ : ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ನಾಗರಿಕರ ಹತ್ಯೆಗೆ ಕಾರಣವಾದ ದುರದೃಷ್ಟಕರ ಘಟನೆ ಅತ್ಯಂತ ಖಂಡನೀಯವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಪ್ರಕರಣವನ್ನು ಎಸ್​ಐಟಿ ತನಿಖೆಗೆ ಆದೇಶಿಸಿದ ಅವರು, ದೇಶದ ಕಾನೂನಿನ ಪ್ರಕಾರ ತನಿಖೆ ನಡೆಯುಲಿದೆ. ಎಲ್ಲರಿಗೂ ನ್ಯಾಯ ದೊರಕುತ್ತದೆ. ಎಲ್ಲರೂ ಶಾಂತಿಯಿಂದ ಇರಬೇಕು ಎಂದು ಟ್ವಿಟರ್​ನಲ್ಲಿ ಮನವಿ ಮಾಡಿದ್ದಾರೆ. ನಾಗಾಲ್ಯಾಂಡ್ ಉಪಮುಖ್ಯಮಂತ್ರಿ ಯಾಂತುಂಗೋ ಪಾಟನ್ ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣವನ್ನು ಕೂಲಂಕಷವಾಗಿ ತನಿಖೆ ಮಾಡಿ, ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

  • Anguished over an unfortunate incident in Nagaland’s Oting, Mon. I express my deepest condolences to the families of those who have lost their lives. A high-level SIT constituted by the State govt will thoroughly probe this incident to ensure justice to the bereaved families.

    — Amit Shah (@AmitShah) December 5, 2021 " class="align-text-top noRightClick twitterSection" data=" ">

ಅಮಿತ್ ಶಾ ಟ್ವೀಟ್ ​: ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಎಸ್‌ಐಟಿ ತನಿಖೆಯು ದುಃಖತಪ್ತ ಕುಟುಂಬಗಳಿಗೆ ನ್ಯಾಯ ಒದಗಿಸುತ್ತದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ನಾಗಾಲ್ಯಾಂಡ್​ನಲ್ಲಿ ಭದ್ರತಾ ಪಡೆ ಫೈರಿಂಗ್​​: 13 ನಾಗರಿಕರು, ಓರ್ವ ಯೋಧ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.