ಇಟಾನಗರ(ಅರುಣಾಚ ಪ್ರದೇಶ): ಹಿಮಾಚಲ ಪ್ರದೇಶದಲ್ಲಿನ 130 ಪಂಚಾಯ್ತಿ ಸ್ಥಾನಗಳ ಪೈಕಿ ಭಾರತೀಯ ಜನತಾ ಪಾರ್ಟಿ ಅವಿರೋಧವಾಗಿ 102 ಸ್ಥಾನಗಳಲ್ಲಿ ಆಯ್ಕೆಯಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಬಮಾಂಗ್ ಫೆಲಿಕ್ಸ್ ತಿಳಿಸಿದ್ದಾರೆ.
ಈ ಎಲ್ಲ ಕ್ಷೇತ್ರಗಳಿಗೆ ಜುಲೈ 12ರಂದು ಚುನಾವಣೆ ನಡೆಯಬೇಕಿತ್ತು. ಆದರೆ, 102 ಸ್ಥಾನಗಳನ್ನ ಬಿಜೆಪಿ ಅವಿರೋಧವಾಗಿ ಗೆದ್ದುಕೊಂಡಿದೆ. ಇನ್ನೂ 14 ಸ್ಥಾನಗಳನ್ನ ಕಾಂಗ್ರೆಸ್ ಗೆದ್ದಿದ್ದು, ಉಳಿದ ಸ್ಥಾನಗಳಲ್ಲಿ ಎನ್ಪಿಪಿ ಮತ್ತು ಪಕ್ಷೇತರ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಫೆಲಿಕ್ಸ್ ಹೇಳಿದ್ದಾರೆ. ಕುರುಂಗ್ ಕುಮೆಯಲ್ಲಿ ಬಿಜೆಪಿ ಐದು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಅದರ ಮಿತ್ರಪಕ್ಷ ಎನ್ಪಿಪಿ 1 ಸ್ಥಾನ ಗೆದ್ದಿದೆ.ಕ್ರಾದಾಡಿ ಗ್ರಾಮ ಪಂಚಾಯ್ತಿಯಲ್ಲಿ ಕಾಂಗ್ರೆಸ್ 1 ಸ್ಥಾನದಲ್ಲಿ ಆಯ್ಕೆಯಾಗಿದ್ದು, ಉಳಿದ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಆಯ್ಕೆಯಾಗಿದೆ.
ಇದನ್ನೂ ಓದಿರಿ: ಮೋದಿ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಪೆಮಾ ಖಂಡು: 130 ಗ್ರಾಮ ಪಂಚಾಯತ್ ಕ್ಷೇತ್ರಗಳ ಪೈಕಿ 102 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಕ್ಕಾಗಿ ಧನ್ಯವಾದಗಳು. ಇವರನ್ನ ಆಯ್ಕೆ ಮಾಡಿರುವ ಎಲ್ಲ ಕಾರ್ಯಕರ್ತರು, ಬೆಂಬಲಿಗರಿಗೆ ಅಭಿನಂಧನೆಗಳು ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅರುಣಾಚಲ ಪ್ರದೇಶದ ಜನರು ತಮ್ಮ ಆಕಾಂಕ್ಷೆ ಈಡೇರಿಸಲು ಅವಿರತವಾಗಿ ಶ್ರಮಿಸುತ್ತಿರುವ ಮುಖ್ಯಮಂತ್ರಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಹೊಂದಿದ್ದು, ಬಿಜೆಪಿಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.