ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸತತವಾಗಿ ಏರಿಕೆಯಾಗುತ್ತಿವೆ. ಈ ಸಂಬಂಧ ಸಿಎಂ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.
ಕೊರೊನಾ ಸೋಂಕಿಗೆ ಒಳಗಾದ ನಂತರ 7-8 ದಿನಗಳು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ಈಗ ನಾನು ನಿಮ್ಮ ಸೇವೆಗೆ ಮರಳಿದ್ದೇನೆ. ಮೊದಲಿಗಿಂತ ನನ್ನ ಆರೋಗ್ಯ ಉತ್ತಮವಾಗಿದೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ.
ಸದ್ಯಕ್ಕೆ ದೆಹಲಿಯಲ್ಲಿ ಲಾಕ್‌ಡೌನ್ ಹೇರುವ ಉದ್ದೇಶವಿಲ್ಲ. ನೀವು ನಿರಂತರವಾಗಿ ಮಾಸ್ಕ್ ಹಾಕಿಕೊಂಡರೆ ದೆಹಲಿಯಲ್ಲಿ ಲಾಕ್‌ಡೌನ್ ಇರುವುದಿಲ್ಲ. ಯಾರೂ ಸಹ ಜೀವನೋಪಾಯದ ಬಿಕ್ಕಟ್ಟನ್ನು ಎದುರಿಸದಂತೆ ಕನಿಷ್ಠ ನಿರ್ಬಂಧಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.
ನಾಳೆ ಅಂದರೆ ಸೋಮವಾರ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ನೇತೃತ್ವದಲ್ಲಿ ಡಿಡಿಎಂಎ ಸಭೆ ನಡೆಯಲಿದೆ. ಅದರಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.
ಇದನ್ನೂ ಓದಿ: ಕರ್ಫ್ಯೂ ನಿಯಮ ಉಲ್ಲಂಘಿಸಿ ಶ್ವಾನದ ಅದ್ದೂರಿ ಹುಟ್ಟುಹಬ್ಬ : ಅಹಮದಾಬಾದ್ನಲ್ಲಿ ಮೂವರ ಬಂಧನ
ಕೇಂದ್ರ ಸರ್ಕಾರದೊಂದಿಗೆ ಈ ಸಂಬಂಧ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಕೇಂದ್ರದ ಬೆಂಬಲವೂ ನಿರಂತರವಾಗಿ ಸಿಗುತ್ತಿದೆ ಎಂದ ಅವರು, ಲಸಿಕೆ ಹಾಕಿಸಿಕೊಳ್ಳದಿರುವವರು ಆದಷ್ಟು ಬೇಗ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು.