ಫಿರೋಜಾಬಾದ್ (ಉತ್ತರ ಪ್ರದೇಶ): ಫಿರೋಜಾಬಾದ್‌ನಲ್ಲಿ ವೈರಲ್ ಫೀವರ್ನಿಂದ 40 ಮಕ್ಕಳು ಸೇರಿದಂತೆ ಸುಮಾರು 60 ಜನರು ಸಾವನ್ನಪ್ಪಿದ್ದಾರೆ. ಹೆಚ್ಚುತ್ತಿರುವ ಸಾವಿನ ಸಂಖ್ಯೆ ಜನರಲ್ಲಿ ಭೀತಿ ಸೃಷ್ಟಿಸಿದೆ.
ಫಿರೋಜಾಬಾದ್ನ ವೈದ್ಯಕೀಯ ಕಾಲೇಜಿನ ಹೊಸ ಕಟ್ಟಡದಲ್ಲಿ ಮಕ್ಕಳ ಚಿಕಿತ್ಸೆಗಾಗಿ ನೂರು ಹೆಚ್ಚುವರಿ ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಇದು ಒಂದು ದಿನ ಅಥವಾ ಎರಡು ದಿನಗಳಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಲಿದೆ.
ಇದರ ಜೊತೆಯಲ್ಲಿ ವಿವಿಧ ಜಿಲ್ಲೆಗಳಿಂದ 15ಕ್ಕೂ ಹೆಚ್ಚು ವೈದ್ಯರ ತಂಡವು ಫಿರೋಜಾಬಾದ್ ತಲುಪಿದೆ ಮತ್ತು ಶೀಘ್ರದಲ್ಲೇ ಹೆಚ್ಚಿನ ವೈದ್ಯರು ಬರುವ ನಿರೀಕ್ಷೆಯಿದೆ. ಇದಲ್ಲದೇ, ರೋಗಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಪ್ಲೇಟ್‌ಲೆಟ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ.
ಸರ್ಕಾರವು ಆರೋಗ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ವರದಿ ನೀಡುವಂತೆ ತಿಳಿಸಿದೆ. ಏತನ್ಮಧ್ಯೆ, ಸೆಪ್ಟೆಂಬರ್ 7 ರಿಂದ 16ರವರೆಗೆ ರಾಜ್ಯದಲ್ಲಿ ಜಾಗೃತಿ ಕಾರ್ಯಕ್ರಮವನ್ನು ನಡೆಸಲು ಸೂಚನೆಗಳನ್ನು ನೀಡಲಾಗಿದೆ.
ಈ ವೇಳೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜ್ವರ ಮತ್ತು ಕೋವಿಡ್-19 ರೋಗ ಲಕ್ಷಣಗಳನ್ನು ಹೊಂದಿರುವವರನ್ನು ಗುರುತಿಸುತ್ತಾರೆ. ಅಲ್ಲದೇ ಪ್ರದೇಶವನ್ನು ನೈರ್ಮಲ್ಯಗೊಳಿಸಲು ನಗರ ಮತ್ತು ಗ್ರಾಮೀಣ ಸಂಸ್ಥೆಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕೆಲವು ಪಶ್ಚಿಮ ಯುಪಿ ಜಿಲ್ಲೆಗಳಾದ ಮಥುರಾ, ಫಿರೋಜಾಬಾದ್, ಮೈನ್‌ಪುರಿಗಳಲ್ಲಿ ಕಳೆದ ಕೆಲವು ದಿನಗಳಿಂದ ವೈರಲ್ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿವೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಆರೋಗ್ಯ ಇಲಾಖೆಯು ಫಿರೋಜಾಬಾದ್‌ನಲ್ಲಿ ನಿಗಾ ವಹಿಸುವಂತೆ ಆದೇಶಿಸಿದ್ದಾರೆ.
ಓದಿ: ಕೊರೊನಾ ಆಯ್ತು, ಈಗ ವಿಭಿನ್ನ ಡೆಂಗ್ಯೂ ಹಾವಳಿ: 40 ಮಕ್ಕಳು ಸೇರಿ ಕನಿಷ್ಠ 50 ಮಂದಿ ಸಾವು