ETV Bharat / bharat

ಅಸಾನಿ ಚಂಡಮಾರುತದ ಅಬ್ಬರ: ನಾಳೆ ಒಡಿಶಾ- ಆಂಧ್ರಪ್ರದೇಶದಲ್ಲಿ ಭಾರಿ ಮಳೆ ಸಾಧ್ಯತೆ - Cyclone ‘Asani’ is intensified over West-central Bay of Bengal

ಅಸಾನಿ ಚಂಡಮಾರುತದ ಪ್ರಭಾವದಿಂದಾಗಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಕರಾವಳಿ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾ ಕರಾವಳಿ ತೀರದಲ್ಲಿ ಭಾರಿ ಮುನ್ನೆಚ್ಚರಿಕೆ ಘೋಷಣೆ ಮಾಡಲಾಗಿದೆ.

Cyclone ‘Asani’ is intensified over West-central Bay of Bengal

author img

By

Published : May 9, 2022, 3:06 PM IST

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತವೂ ತೀವ್ರಗೊಂಡಿದ್ದು, ವಾಯವ್ಯ ಭಾಗದತ್ತ ಚಲಿಸುತ್ತಿದೆ. ಪೋರ್ಟ್ ಬ್ಲೇರ್‌ನ ಪಶ್ಚಿಮ-ವಾಯವ್ಯಕ್ಕೆ ಸುಮಾರು 570 ಕಿಮೀ ದೂರದಲ್ಲಿದ್ದು, ಮಂಗಳವಾರ ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಿಂದ ಪಶ್ಚಿಮ ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿ ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಅಸಾನಿ ಚಂಡಮಾರುತದ ಪ್ರಭಾವದಿಂದಾಗಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಕರಾವಳಿ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾ ಕರಾವಳಿ ತೀರದಲ್ಲಿ ಭಾರಿ ಮುನ್ನೆಚ್ಚರಿಕೆ ಘೋಷಣೆ ಮಾಡಲಾಗಿದೆ.

ಕರಾವಳಿಯಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಆಯಾ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಘೋಷಣೆ ಮಾಡಿವೆ. ಚಂಡಮಾರುತವು ಕರಾವಳಿಯನ್ನು ಸಮೀಪಿಸುತ್ತಿದ್ದಂತೆ ದಿಕ್ಕು ಬದಲಾಯಿಸಲಿದ್ದು, ಬಂಗಾಳದ ಕಡೆಗೆ ಚಲಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ:2020ರಲ್ಲಿ ದೇಶಕ್ಕೆ ಅಪ್ಪಳಿಸಿದ ನೈಸರ್ಗಿಕ ವಿಕೋಪಗಳು: ಇಲ್ಲಿದೆ ಸಂಪೂರ್ಣ ಮಾಹಿತಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.