ನವದೆಹಲಿ: ಕೋವಿಡ್-19 ಸಾಂಕ್ರಮಿಕ ರೋಗವನ್ನು ತಡೆಗಟ್ಟವ ಸಲುವಾಗಿ ಜನರು ತಮ್ಮ ದೈನಂದಿನ ಜೀವನದಲ್ಲಿ ಮಾಸ್ಕ್ ಧರಿಸವುದು ಸರ್ವೇ ಸಾಮಾನ್ಯವಾಗಿದೆ. ಕೊರೊನಾದಿಂದ ಹಲವಾರು ನಿಯಮಗಳನ್ನು ಜಾರಿಗೊಳಿಸಿದ್ದರೂ ಅವುಗಳನ್ನು ಉಲ್ಲಂಘಿಸಿ ಜನರು ಅಜ್ಞಾನಿಗಳಂತೆ ವರ್ತಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ದೆಹಲಿಯ ಶಹದಾರ ಜಿಲ್ಲೆಯಲ್ಲಿ ಇಂತಹುದೇ ಘಟನೆ ನಡೆದಿದೆ.
ಶಹದಾರ ಜಿಲ್ಲೆಯ ಸೀಮಾಪುರಿ ಪೊಲೀಸ್ ಠಾಣಾ ವ್ಯಾಪ್ತಿಯ ದಿಲ್ಶಾದ್ ಗಾರ್ಡನ್ ಬಳಿ ಭಾನುವಾರ ಬೆಳಗ್ಗೆ ಕಾರಿನಲ್ಲಿ ಕುಳಿತಿದ್ದ ವ್ಯಕ್ತಿ ಹಾಗೂ ಇಬ್ಬರು ಮಹಿಳೆಯರಿಗೆ ಮಾಸ್ಕ್ ಹಾಕುವಂತೆ ಗಸ್ತು ತಿರುಗುತ್ತಿದ್ದ ಪೊಲೀಸರು ಸೂಚಿಸಿದಾಗ, ಅವರು ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
ಅಷ್ಟೇ ಅಲ್ಲದೆ, ಕಾರಿನಲ್ಲಿದ್ದ ಮಹಿಳೆಯೊಬ್ಬರು ಪೊಲೀಸರಿಗೆ ಕಪಾಳಮೋಕ್ಷ ಮಾಡಿದ್ದು, ವ್ಯಕ್ತಿ ಗನ್ ತೆಗೆದುಕೊಂಡು ಗುಂಡು ಸಹ ಹಾರಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಶಹದ್ರಾ ಠಾಣೆ ಪೊಲೀಸರ ತಂಡ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಆರೋಪಿಗಳು ಪೂರ್ವ ದೆಹಲಿಯ ಪಟ್ಪರ್‌ಗಂಜ್ ಗ್ರಾಮದ ನಿವಾಸಿಗಳಾಗಿದ್ದಾರೆ. ಆರೋಪಿಯು ವೃತ್ತಿಯಲ್ಲಿ ವಕೀಲನಾಗಿದ್ದು ನಂದ ನಗರಿಯಲ್ಲಿ ಬಾಲಾಪರಾಧಿ ನ್ಯಾಯ ಮಂಡಳಿಯ ಕಲ್ಯಾಣಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಓದಿ: 1.80 ಲಕ್ಷ ಸನಿಹಕ್ಕೆ ಬಂದ ಕೊರೊನಾ ಪ್ರಕರಣಗಳು.. ದೇಶದಲ್ಲಿ ಕೋವಿಡ್ ಆತಂಕ!