ಗುವಾಹಟಿ: ಅಸ್ಸೋಂನಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದು, ಸಾವು-ನೋವುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಕುರಿತ ವರದಿ ಮಾಡಿರುವ ASDMA, ರಾಜ್ಯದಲ್ಲಿ ಪ್ರವಾಹದ ಪರಿಸ್ಥಿತಿ ಕಡಿಮೆಯಾಗಿಲ್ಲ. ಇನ್ನೂ 22 ಜಿಲ್ಲೆಗಳು ಪ್ರವಾಹದ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಅವುಗಳಲ್ಲಿ ಒಟ್ಟು 2,254 ಗ್ರಾಮಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿವೆ.
ಕಳೆದ ಸೋಮವಾರದವರೆಗೆ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆಯೂ ಏರಿಕೆಯಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. 2,774 ಪ್ರಾಣಿಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ ಎಂದು ವರಿದಿ ಮಾಡಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಭಾರತೀಯ ಸೇನೆ, ಅಗ್ನಿಶಾಮಕ ದಳ ಮೊದಲಾದವರು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ರಾಜ್ಯಾದ್ಯಂತ ಒಟ್ಟು 191,194 ಜನರು 715 ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇದರೊಂದಿಗೆ ಒಟ್ಟು 74,655.89 ಹೆಕ್ಟೇರ್ ಕೃಷಿ ಭೂಮಿ ಪ್ರವಾಹಕ್ಕೆ ತುತ್ತಾಗಿದ್ದು, ಕಪಿಲಿ ನದಿ ಇನ್ನೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಚಾಲನೆ ವೇಳೆ ಅಪಘಾತ ಸಂಭವಿಸಿದರೆ ಡಿಸಿಪಿ ನೇರ ಹೊಣೆ: ಚಾಲಕನ ನೋವಿನ ಪತ್ರ ವೈರಲ್