ಅಸ್ಸೆೋಂ : 6 ವರ್ಷ ಪ್ರಾಯದ ಪುಟ್ಟ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಪ್ರಕರಣ ಅಸ್ಸೆೋಂಮಿನ ಹೈಲಕಂಡಿ ಎಂಬಲ್ಲಿ ನಡೆದಿದೆ. ಘಟನೆಯ ಸಂಬಂಧ 15ರ ಹರೆಯದ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಬಗ್ಗೆ ಹೈಲಕಂಡಿ ಎಸ್ಪಿ ಗೌರವ್ ಉಪಾಧ್ಯಾಯ್ ಮಾತನಾಡಿ, ಪುಟ್ಟ ಬಾಲಕಿಯ ಅತ್ಯಾಚಾರ ಮಾಡಿದ ಅಪ್ರಾಪ್ತ ಬಾಲಕನನ್ನು ಈಗಾಗಲೇ ಬಂಧಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಇದ್ದರೂ, ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಆರೋಪಿಯ ತಂದೆಯನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ತನಿಖೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.