ಗುವಾಹಟಿ(ಅಸ್ಸೋಂ): ಇಲ್ಲಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಬೊಕಾಜನ್ ಎಂಬಲ್ಲಿ 1.04 ಕೆಜಿ ತೂಕದ ಹೆರಾಯಿನ್ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ ಅಂತಾ ಶುಕ್ರವಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ವಶಪಡಿಸಿಕೊಂಡ ಹೆರಾಯಿನ್ ಮೌಲ್ಯ ಬರೋಬ್ಬರಿ 7 ಕೋಟಿ ರೂಪಾಯಿಗೂ ಅಧಿಕವಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿಯಲ್ಲಿ ದಲಿತ ಯುವಕನ ಹತ್ಯೆ ಪ್ರಕರಣ: ಆರೋಪಿ ಬಂಧಿಸುವಂತೆ ಸಿದ್ದು ಒತ್ತಾಯ