ETV Bharat / bharat

ಅಸ್ಸೋಂ ಕದನ ಕಣ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ - ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಅಸ್ಸೋಂನಲ್ಲಿಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಹಲವೆಡೆ ಘರ್ಷಣೆಗಳು ಉಂಟಾಗಿವೆ. ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು ಹಲವರ ಸ್ಥಿತಿ ಗಂಭೀರವಾಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.

ಮಾರಾಮಾರಿ
ಮಾರಾಮಾರಿ
author img

By

Published : Mar 27, 2021, 4:58 PM IST

ನಾಗವೊನ್: ಅಸ್ಸೋಂನ 47 ವಿಧಾನಸಭಾ ಸ್ಥಾನಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ನಾಗವೊನ್ ಕ್ಷೇತ್ರದ ಚಮಗುರಿಯಲ್ಲಿರುವ ಮತದಾನ ಕೇಂದ್ರವೊಂದರಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಸಂಘರ್ಷದಲ್ಲಿ ಅಬುಲ್​​ ಅಹ್ಮದ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಚಮಗುರಿಯ ಪೆನೈ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಮತದಾನಕ್ಕೆ ಯತ್ನಿಸಿದ್ದಾರೆಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ಕೆಲ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕನ ವಾಹನವನ್ನು ಧ್ವಂಸ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಚಮಗುರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :3 ಗಂಟೆಯವರೆಗೆ ಬಂಗಾಳದಲ್ಲಿ ಶೇ 55.27, ಅಸ್ಸೋಂನಲ್ಲಿ ಶೇ 47.10ರಷ್ಟು ಮತದಾನ

ಬಾಜಿಯಾಗಾಂವ್​ನ ಮತಗಟ್ಟೆಯೊಂದರಲ್ಲಿ ಚುನಾವಣಾಧಿಕಾರಿಯ ವಾಹವನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.