ಅಸ್ಸೋಂ : ದತ್ತು ಮಗಳ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಪದ್ಮ ಪ್ರಶಸ್ತಿ ಪುರಸ್ಕೃತ ಉದ್ಧಬ್ ಭರಾಲಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ, ಉತ್ತರ ಲಖೀಂಪುರ ಪೊಲೀಸರು ಅಸ್ಸೋಂ ಮೂಲದ ಭರಾಲಿ ಅವರನ್ನ ವಶಕ್ಕೆ ಪಡೆದಿದ್ದಾರೆ.
ಕಳೆದ ತಿಂಗಳು ಅವರು ಮೇಲೆ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೆಟ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.
ಪ್ರಕರಣ ದಾಖಲಾದ ಬಳಿಕ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಗೌಹಾಟಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಆದರೆ, ನಿನ್ನೆ ಜಾಮೀನು ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ ಹೊಸ ಜಾಮೀನಿಗೋಸ್ಕರ ನ್ಯಾಯಾಯಲದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಅದು ತಿರಸ್ಕೃತಗೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಕಳೆದ ಕೆಲ ವರ್ಷಗಳ ಹಿಂದೆ ಬಾಲಕಿ ದತ್ತು ಪಡೆದುಕೊಂಡಿದ್ದ ಉದ್ಭಬ್ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆಂಬ ಆರೋಪ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಕೇಳಿ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಉದ್ಧಬ್ ಭಾರಾಲಿ ಜಾಮೀನು ಕೋರಿ ಗೌಹಾಟಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.
ನ್ಯಾಯಮೂರ್ತಿ ಅರುಣ್ ದೇವ್ ಚೌಧರಿ ಅವರ ರಜಾಕಾಲದ ಪೀಠವು ಅವರಿಗೆ ಕೆಲವು ಷರತ್ತುಗಳೊಂದಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಈ ವೇಳೆ ಪ್ರತಿಕ್ರಿಯೆ ನೀಡಿದ್ದ ಅವರು ತಮ್ಮ ಮೇಲೆ ಕೇಳಿ ಬಂದಿರುವ ಆರೋಪದಿಂದ ಆದಷ್ಟು ಬೇಗ ದೋಷಮುಕ್ತರಾಗಿ ಹೊರ ಬರುವುದಾಗಿ ಹೇಳಿದ್ದರು.
ಇದನ್ನೂ ಓದಿರಿ: ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯಲ್ಲಿ ವಿಲೀನಗೊಂಡ ಅಮರ್ ಜವಾನ್ ಜ್ಯೋತಿ!
ಉದ್ಧಬ್ ಭಾರಾಲಿ ಅವರು 460 ಯಂತ್ರೋಪಕರಣಗಳ ಪೇಟೆಂಟ್ ಹೊಂದಿದ್ದಾರೆ. ಅವರು ಭತ್ತ ಒಕ್ಕಣೆ, ಕಬ್ಬು ತೆಗೆಯುವ ಯಂತ್ರ, ದಾಳಿಂಬೆ ಡಿ-ಸಿಡರ್ ಮುಂತಾದ ಆವಿಷ್ಕಾರಗಳಿಗೆ ಹೆಸರುವಾಸಿಯಾಗಿದ್ದಾರೆ. ಇವರ ಸಾಧನೆಗೆ 2019ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿತ್ತು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ