ಕೇಂದ್ರ ಸರ್ಕಾರದ ರಾಷ್ಟ್ರೀಯ ಸಣ್ಣ ಕೈಗಾರಿಕಾ ನಿಗಮ ನಿಯಮಿತದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 51 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತಾದ್ಯಂತ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: 51 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆ ಭರ್ತಿ ನಡೆಸಲಾಗುವುದು
ವಿದ್ಯಾರ್ಹತೆ: ಅಭ್ಯರ್ಥಿಯು ಸಿಎ, ಸಿಎಂಎ, ಎಲ್ಎಲ್ಬಿ, ಪದವಿ, ಬಿಇ ಅಥವಾ ಎಂಬಿಎ, ಸ್ನಾತಕೋತ್ತರ ಪದವಿ ಹೊಂದಿರಬೇಕಿದೆ.
ವಯೋಮಿತಿ: ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 28 ವರ್ಷ ಆಗಿದೆ. ಪ.ಜಾ, ಪ.ಪಂ ಮತ್ತು ಇನ್ನಿತರ ವರ್ಗಗಳಿಗೆ ಸರ್ಕಾರದ ನಿಯಮದಂತೆ ವಯೋಮಿತಿ ಸಡಿಲಿಕೆ ನೀಡಲಾಗುವುದು.
ವೇತನ: ಈ ಹುದ್ದೆಗೆ ಮಾಸಿಕ 30 ಸಾವಿರದಿಂದ 1,20,000ರೂವರೆಗೆ ವೇತನ ನಿಗದಿ ಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಹಾಗೂ ಇಲಾಖಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರ ಅಭ್ಯರ್ಥಿಗಳಿಗೆ 1500 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಲಭ್ಯವಿರುವ ನಿಗದಿತ ಅರ್ಜಿಯನ್ನು ಭರಿಸಬೇಕು. ನಂತ ಈ ಅರ್ಜಿ ಜೊತೆಗೆ ಶೈಕ್ಷಣಿಕ ಅರ್ಹತೆ, ಮೀಸಲಾತಿ ಸೇರಿದಂತೆ ಇನ್ನಿತರ ಅಗತ್ಯ ದಾಖಲೆ ಪ್ರಮಾಣಪತ್ರದೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಅರ್ಜಿ ಸಲ್ಲಿಕೆ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ವಿಳಾಸ: ಸಿನಿಯರ್ ಜನರಲ್ ಮ್ಯಾನೇಕರ್- ಮಾನವ ಸಂಪನ್ಮೂಲ, ರಾಷ್ಟ್ರೀಯ ಸಣ್ಣ ಕೈಗಾರಿಕಾ ನಿಗಮ ನಿಯಮಿತ, ಎನ್ಎಸ್ಊಸಿ ಭವನ್, ಒಕ್ಲಾ ಇಂಡಸ್ಟ್ರೀಯಲ್ ಎಸ್ಟೇಟ್, ನವದೆಹಲಿ- 110020.
ಸೆಪ್ಟೆಂಬರ್ 4 ರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 29 ಆಗಿದೆ. ಹಾರ್ಡ್ ಕಾಪಿ ಸಲ್ಲಿಕೆ ಮಾಡಲು ಕಡೆಯ ದಿನಾಂಕ ಅಕ್ಟೋಬರ್ 6 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಅಭ್ಯರ್ಥಿಗಳು nsic.co.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: Job Alert: ಅತಿಥಿ ಉಪನ್ಯಾಸಕರ ಹುದ್ದೆ ನೇಮಕಾತಿ; ಸೆ.2 ಅರ್ಜಿ ಸಲ್ಲಿಕೆಗೆ ಕಡೆಯ ದಿನ