ETV Bharat / bharat

ಕೇಜ್ರಿವಾಲ್​​ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸೌರಭ್ ಭಾರದ್ವಾಜ್ ಮತ್ತು ಅತಿಶಿ - delhi news in kannada

ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜೈಲು ಪಾಲಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ ನಂತರ ಶಾಸಕರಾದ ಸೌರಭ್ ಭಾರದ್ವಾಜ್ ಮತ್ತು ಅತಿಶಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

atishi-new-education-minister-saurabh-bharadwaj-new-health-minister-of-delhi
ದೆಹಲಿ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸೌರಭ್ ಭಾರದ್ವಾಜ್ ಮತ್ತು ಅತಿಶಿ
author img

By

Published : Mar 9, 2023, 7:42 PM IST

ನವದೆಹಲಿ: ಆಮ್​ ಆದ್ಮಿ ಪಕ್ಷದ ಶಾಸಕರಾದ ಸೌರಭ್ ಭಾರದ್ವಾಜ್ ಮತ್ತು ಅತಿಶಿ ಅವರು ಗುರುವಾರದಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಮ್‌ವೀರ್ ಸಿಂಗ್ ಬಿಧೂರ್ ಸಹ ಭಾಗವಹಿಸಿದ್ದರು.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅತಿಶಿ ಅವರು ಶಿಕ್ಷಣ, ವಿದ್ಯುತ್ ಮತ್ತು ಪ್ರವಾಸೋದ್ಯಮ ಇಲಾಖೆಗಳ ಖಾತೆಯನ್ನು ನಿರ್ವಹಿಸಲಿದ್ದು. ಸೌರಭ್​​ ಭಾರದ್ವಾಜ್ ಅವರು ಆರೋಗ್ಯ, ನಗರಾಭಿವೃದ್ಧಿ, ನೀರು ಮತ್ತು ಕೈಗಾರಿಕೆಗಳನ್ನು ಖಾತೆಯ ಸಚಿವರಾಗಿ ನೇಮಕಗೊಂಡರು. ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ ನಂತರ ಸೌರಭ್​ ಭಾರದ್ವಾಜ್​ ಮತ್ತು ಅತಿಶ್​ ಅವರು ನೂತನ ಸಚಿವರಾಗಿ ಕೇಜ್ರಿವಾಲ್​ ಕ್ಯಾಬಿನೆಟ್​ಗೆ ಸೇರ್ಪಡೆಯಾಗಿದ್ದಾರೆ.

ಮಾರ್ಚ್​ 20ರವರೆಗೆ ನ್ಯಾಯಂಗ ಬಂಧನದಲ್ಲಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರನ್ನು ಫೆಬ್ರವರಿ 26ರಂದು ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿತ್ತು. ಕಳೆದ ವರ್ಷ ಮೇ 30ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಮನೀಶ್​ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದರು.

ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಅತಿಶಿ ಮತ್ತು ಭಾರದ್ವಾಜ್ ಅವರನ್ನು ಕ್ಯಾಬಿನೆಟ್ ಮಂತ್ರಿಗಳಾಗಿ ನೇಮಕ ಮಾಡಲು ರಾಷ್ಟ್ರಪತಿ ಮುರ್ಮು ಅವರಿಗೆ ಶಿಫಾರಸು ಮಾಡಿದ್ದರು. ಮಾರ್ಚ್ 9ರಂದು ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾರ್ಚ್ 17 ರಿಂದ ಪ್ರಾರಂಭವಾಗುವ ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ನೂತ ಸಚಿವರಾದ ಅತಿಶಿ ಮತ್ತು ಭಾರದ್ವಾಜ್ ಅವರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

2013ರಿಂದ ಎಎಪಿಯ ಶಾಸಕರಾಗಿದರುವ ಸೌರಭ ಭಾರದ್ವಾಜ್ ಅವರು ಪ್ರಸ್ತುತ ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ 2013ರ ಕೇಜ್ರಿವಾಲ್ ಸರ್ಕಾರದ ಮೊದಲ ಅವಧಿಯಲ್ಲಿ ಸಚಿವರಾಗಿದ್ದರು. 2020ರಿಂದ ಎಎಪಿಯ ಶಾಸಕರಾಗಿರುವ ಅತಿಶಿ ಅವರು ಈ ಹಿಂದೆ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರ ಶಿಕ್ಷಣ ಖಾತೆಯ ಸಲಹೆಗಾರರಾಗಿದ್ದರು.

ಈ ನಡುವೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಹಾಗೂ ಇನ್ನೊಬ್ಬ ಮಾಜಿ ಸಚಿವ ಜೈನ್​​ ಜೈಲಿನಲ್ಲಿದ್ದಾರೆ. ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ಜೈಲಿನಲ್ಲಿದ್ದರೂ ಬಹಳ ದಿನಗಳ ಕಾಲ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಆದರೆ ಅಬಕಾರಿ ಹಗರಣದ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಬಂಧನವಾದ ಮೇಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದರು. ಆ ಬಳಿಕ ಸತ್ಯೇಂದ್ರ ಜೈನ್​ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದರು.

ಮನೀಶ್​ ಸಿಸೋಡಿಯಾ 18 ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಸೌರಭ್​​ ಭಾರದ್ವಾಜ್​​​, ಅತಿಶಿ ಅವರನ್ನು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.​

ಇದನ್ನೂ ಓದಿ: ಮಾ.10ಕ್ಕೆ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ದೆಹಲಿ ಕೋರ್ಟ್.. ಮತ್ತೆರಡು ದಿನ ಸಿಬಿಐ ವಶಕ್ಕೆ​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.