ಮುಂಬೈ(ಮಹಾರಾಷ್ಟ್ರ): ನಡುರಸ್ತೆಯಲ್ಲೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಕತ್ತಿ ಮತ್ತು ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಮುಂಬೈನ ಬೋರಿವಿಲಿ ಎಂಬಲ್ಲಿ ನಡೆದಿದೆ. ಘಟನೆಯ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಕೀಲರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ವೇಳೆ ಅವರನ್ನು ರಕ್ಷಣೆ ಮಾಡಲು ಕೆಲವರು ಮುಂದಾಗಿರುವ ಘಟನೆಯೂ ನಡೆದಿದೆ. ಪ್ರಕರಣದಲ್ಲಿ 12 ಜನರು ಭಾಗಿಯಾಗಿದ್ದಾರೆಂದು ಹೇಳಲಾಗುತ್ತಿದ್ದು, ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಫೋನ್ನಲ್ಲಿ ಮಾತನಾಡುತ್ತಾ ಕುಳಿತಿದ್ದ ವ್ಯಕ್ತಿ ಮೇಲೆ ತಲವಾರ್‌ನಿಂದ ಹಲ್ಲೆ!
ಘಟನೆಯ ಕುರಿತಾಗಿ ಪ್ರಕರಣ ದಾಖಲಿಸಿಕೊಂಡಿರುವ MHB ಪೊಲೀಸ್ ಠಾಣೆ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.