ಪುಣೆ(ಮಹಾರಾಷ್ಟ್ರ): ಫೋನ್ನಲ್ಲಿ ಮಾತನಾಡುತ್ತ ಕುಳಿತಿದ್ದ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಯೋರ್ವ ತಲವಾರಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಪುಣೆಯ ಲೋನಿ ಕಲ್ಭೋರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೋಟೆಲ್ ನಡೆಸುತ್ತಿದ್ದ ಮಾಲೀಕನ ಮೇಲೆ ಈ ಹಲ್ಲೆ ನಡೆದಿದೆ. ಹೊಟೇಲ್‌ನ ಹೊರಗಡೆ ಫೋನ್ನಲ್ಲಿ ಮಾತನಾಡುತ್ತ ಕುಳಿತಿದ್ದಾಗ ಬೈಕ್‌ನಲ್ಲಿ ಬಂದಿರುವ ವ್ಯಕ್ತಿ ಏಕಾಏಕಿ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಿದ್ದಾನೆ. ಭಾನುವಾರ ರಾತ್ರಿ 10 ಗಂಟೆಯ ಸುಮಾರಿಗೆ ಘಟನೆ ನಡೆದಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ರಾಮದಾಸ್ ಕಾಕಡೆ ಉರ್ಲಿಕಂಚನ್ ಪ್ರದೇಶದಲ್ಲಿ ಹೋಟೆಲ್ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಅವರ ಮೇಲೆ ಹಲ್ಲೆ ನಡೆದಿದೆ ಎಂಬುದರ ಬಗ್ಗೆ ಇಲ್ಲಿಯವರೆಗೂ ಮಾಹಿತಿ ತಿಳಿದು ಬಂದಿಲ್ಲ. ರಾಮದಾಸ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಲ್ಲೆ ನಡೆಸಿರುವ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.