ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ (ಸಿಎಸ್) ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಕೇಂದ್ರ ಗೃಹ ಸಚಿವಾಲಯ ಸಮನ್ಸ್ ನೀಡಿದೆ.
ನಿನ್ನೆ ಡೈಮಂಡ್ ಹಾರ್ಬರ್‌ನಲ್ಲಿ ನಡೆದ ಘಟನೆ ಕುರಿತು ವರದಿ ನೀಡುವಂತೆ ಪಶ್ಚಿಮ ಬಂಗಾಳದ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ಗೆ (ಟಿಎಂಸಿ) ಗೃಹ ಸಚಿವಾಲಯ ಕೇಳಿತ್ತು. ಇಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ಇತ್ತ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಗೃಹ ಸಚಿವ ಅಮಿತ್ ಶಾ ಸಮನ್ಸ್ ನೀಡಿ, ದೆಹಲಿಗೆ ಬರಲು ಹೇಳಿದ್ದಾರೆ.
ಓದಿ: ಜೆಪಿ ನಡ್ಡಾ ವಾಹನ ಮೇಲೆ ದಾಳಿ: ತನಿಖೆಗೆ ಆದೇಶಿಸುವಂತೆ ಸಿಎಂ ದೀದಿಗೆ ಬಿಎಸ್ವೈ ಒತ್ತಾಯ
ಗುರುವಾರ ಮಧ್ಯಾಹ್ನ ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಶೇಕ್ ಬ್ಯಾನರ್ಜಿ ಅವರ ಲೋಕಸಭಾ ಕ್ಷೇತ್ರವಾದ ಡೈಮಂಡ್ ಹಾರ್ಬರ್ಗೆ ತೆರಳುತ್ತಿದ್ದ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿತ್ತು. ಘಟನೆಯಲ್ಲಿ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ ಪಕ್ಷದ ಹಲವಾರು ನಾಯಕರು ಗಾಯಗೊಂಡಿದ್ದರು. ಈ ಕೃತ್ಯವನ್ನು ಟಿಎಂಸಿ ಕಾರ್ಯಕರ್ತರು ಎಸಗಿದ್ದಾರೆ ಎಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು.