ಜೀಡಿಮೆಟ್ಲ (ತೆಲಂಗಾಣ): ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ವ್ಯಕ್ತಿಗೆ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೀಡಿಮೆಟ್ಲ ತಹಶೀಲ್ದಾರರ ನೀಡಿರುವ ಪ್ರಕಾರ, ಆರೋಪಿಯು ಪತ್ನಿ, ನಾಲ್ಕು ಮಕ್ಕಳೊಂದಿಗೆ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಈ ದಂಪತಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು.
ನವೆಂಬರ್ 23, 2019 ರಂದು, ಆರೋಪಿಯ ಒಂಬತ್ತು ವರ್ಷದ ಮಗನಿಗೆ ಫಿಟ್ಸ್ ಬಂದಿದ್ದ ಕಾರಣಕ್ಕೆ ನಿಲೋಫರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ವೇಳೆ ಉಳಿದ ಮೂವರು ಮಕ್ಕಳನ್ನು ಸನತ್‌ನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ಇರಿಸಲಾಗಿತ್ತು. ಮರುದಿನ ತಾಯಿ ಆಸ್ಪತ್ರೆಯಲ್ಲಿದ್ದರು. ಇದರಿಂದ ತಂದೆ ತನ್ನ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿದ್ದ. ಅದೇ ರಾತ್ರಿ ತನ್ನ ಮಗಳ ಮೇಲೆ (12) ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದನು. ಇದರಿಂದ ಬಾಲಕಿ ಭಯದಿಂದ ಅಳುತ್ತಾ ಕುಳಿತಿದ್ದಳು. ಮನೆಯ ಮಾಲೀಕರು ಗಮನಿಸಿ ಏನಾಯಿತು ಎಂದು ವಿಚಾರಿಸಿದ್ದಾರೆ.
ಈ ಕುರಿತು ತಿಳಿಸಿದ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದರು. ಬಳಿಕ ಇದು ಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಡ್ಚಲ್ ಜಿಲ್ಲಾ ವಿಶೇಷ ತ್ವರಿತ ನ್ಯಾಯಾಲಯದ ನ್ಯಾಯಾಧೀಶರು ಗುರುವಾರ ತೀರ್ಪು ಪ್ರಕಟಿಸಿದ್ದಾರೆ. ಅಪರಾಧಿ ತಂದೆ 20 ವರ್ಷ ಜೈಲು ಶಿಕ್ಷೆ ಹಾಗೂ 500 ರೂ. ದಂಡ ವಿಧಿಸಲಾಗಿದೆ.
ಪ್ರತೇಕ ಪ್ರಕರಣ, ಯುವತಿಗೆ ಲೈಂಗಿಕ ಕಿರುಕುಳ: ಮೆಟ್ರೋದಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಭದ್ರತಾ ಸಿಬ್ಬಂದಿ ಹಿಡಿದು ಬೆಂಗಳೂರಿನ ಉಪ್ಪಾರಪೇಟೆ ಠಾಣಾ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಿನ್ನೆ ಗುರುವಾರ ನಡೆದಿತ್ತು. ಲೋಕೇಶ್ ಆಚಾರ್ ಬಂಧಿತ ಆರೋಪಿ.
ಡಿ.7ರಂದು ಬೆಳಗ್ಗೆ 9.40ರ ಸುಮಾರಿಗೆ ಬೆಂಗಳೂರಿನ ರಾಜಾಜಿ ನಗರದಲ್ಲಿ ಮೆಟ್ರೋ ಹತ್ತಿದ್ದ 22 ವರ್ಷದ ಯುವತಿಯ ಮೈ ಮುಟ್ಟಿ ಆರೋಪಿ ಕಿರುಕುಳ ನೀಡಿದ್ದ. ಯುವತಿ ಜೋರಾಗಿ ಕೂಗುತ್ತಿದ್ದಂತೆ ಆರೋಪಿ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಮೆಟ್ರೋ ನಿಲ್ದಾಣದ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು, ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಹಿಂದೆ, ಕೂಡ ಬಿಎಂಟಿಸಿ ಬಸ್ನಲ್ಲಿ ಆರೋಪಿ ಲೋಕೇಶ್ ಯುವತಿಯ ಮೊಬೈಲ್ ಕಳ್ಳತನ ಮಾಡಲು ಹೋಗಿ ಸಿಕ್ಕಿ ಬಿದ್ದಿರುವುದು, ಪೊಲೀಸರ ತನಿಖೆಯ ವೇಳೆ ತಿಳಿದು ಬಂದಿದೆ. ಆರೋಪಿಯಿಂದ 20 ಮೊಬೈಲ್ ಫೋನ್ಗಳು ಹಾಗೂ ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ