ನವದೆಹಲಿ: ಸ್ವಾತಂತ್ರ್ಯದ ನಂತರ ಭಾರತದ ಸಂಸ್ಕೃತಿ ಮತ್ತು ಮೌಲ್ಯಗಳ ಜೊತೆಗೆ ಅನೇಕ ಮಹಾನ್ ನಾಯಕರ ಕೊಡುಗೆಗಳನ್ನು ಅಳಿಸಿ ಹಾಕಲು ಪ್ರಯತ್ನಿಸಲಾಗಿದೆ. ಆದ್ರೆ ಇದೀಗ ಆ ತಪ್ಪುಗಳನ್ನು ನಮ್ಮ ಸರ್ಕಾರದಿಂದ ಸರಿಪಡಿಸಲಾಗುತ್ತಿದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತ್ಯುತ್ಸವದ ಅಂಗವಾಗಿ, ಭಾನುವಾರ ಮೋದಿ ಇಂಡಿಯಾ ಗೇಟ್‌ನಲ್ಲಿ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಿದರು.
ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ವಿಶ್ವದ ಯಾವುದೇ ಶಕ್ತಿ ನವಭಾರತ ನಿರ್ಮಾಣದ ಗುರಿ ಸಾಧಿಸುವುದನ್ನು ತಡೆಯಲು ಸಾಧ್ಯವಿಲ್ಲ. 2047 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆತು ನೂರು ವರ್ಷವಾಗಲಿದೆ. ಅಷ್ಟರೊಳಗೆ ನವಭಾರತ ನಿರ್ಮಾಣವಾಗಲಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ "ಮಾಡಬಲ್ಲೆವು" ಮತ್ತು "ಮಾಡುವೆವು" ಎಂಬ ಧ್ಯೇಯವಾಕ್ಯದಿಂದ ಸ್ಫೂರ್ತಿ ಪಡೆಯುವಂತೆ ಜನತೆಗೆ ಮೋದಿ ಉತ್ತೇಜಿಸಿದರು.
-
#WATCH | Prime Minister Narendra Modi unveiled hologram statue of Netaji Subhas Chandra Bose at India Gate on his 125th birth anniversary #ParakramDiwas pic.twitter.com/vGQMSzLgfc
— ANI (@ANI) January 23, 2022 " class="align-text-top noRightClick twitterSection" data="
">#WATCH | Prime Minister Narendra Modi unveiled hologram statue of Netaji Subhas Chandra Bose at India Gate on his 125th birth anniversary #ParakramDiwas pic.twitter.com/vGQMSzLgfc
— ANI (@ANI) January 23, 2022#WATCH | Prime Minister Narendra Modi unveiled hologram statue of Netaji Subhas Chandra Bose at India Gate on his 125th birth anniversary #ParakramDiwas pic.twitter.com/vGQMSzLgfc
— ANI (@ANI) January 23, 2022
ಸ್ವಾತಂತ್ರ್ಯದ ನಂತರ ರಾಷ್ಟ್ರದ ಸಂಸ್ಕೃತಿಯ ಹೊರತಾಗಿ ಅನೇಕ ಮಹಾನ್ ವ್ಯಕ್ತಿಗಳ ಕೊಡುಗೆಗಳನ್ನು ಅಳಿಸಲು ಪ್ರಯತ್ನಿಸಲಾಯಿತು. ಭಾರತದ ಸ್ವಾತಂತ್ರ್ಯ ಹೋರಾಟವು ಲಕ್ಷಾಂತರ ಜನರ ತ್ಯಾಗವನ್ನು ಒಳಗೊಂಡಿದೆ. ಆದರೆ ಅವರ ಇತಿಹಾಸವನ್ನು ಅಳಿಸಿ ಹಾಕಲು ಪ್ರಯತ್ನಿಸಲಾಗಿದೆ. ಇಂದು ಆ ತಪ್ಪುಗಳನ್ನು ಸರಿಪಡಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.
ಇದೇ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, 2019, 2020, 2021 ಮತ್ತು 2022 ರ 'ಸುಭಾಸ್ ಚಂದ್ರ ಬೋಸ್ ಆಪ್ದ ಪ್ರಬಂಧನ್ ಪುರಸ್ಕಾರ'ವನ್ನು ಸಹ ಪ್ರದಾನ ಮಾಡಿದರು. ಸಮಾರಂಭದಲ್ಲಿ ಒಟ್ಟು ಏಳು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಇದನ್ನೂ ಓದಿ: Fever Survey: ತೆಲಂಗಾಣದಲ್ಲಿ 1 ಲಕ್ಷಕ್ಕೂ ಹೆಚ್ಚು ಕೋವಿಡ್ ರೋಗಲಕ್ಷಣವಿರುವವರು ಪತ್ತೆ
ಇದೇ ವೇಳೆ ತಮ್ಮ ಸರ್ಕಾರ ವಿಪತ್ತು ನಿರ್ವಹಣೆಗೆ ಆದ್ಯತೆ ನೀಡಿದೆ ಎಂದು ಮೋದಿ ಪ್ರತಿಪಾದಿಸಿದರು. ಪರಿಹಾರ, ರಕ್ಷಣೆ ಮತ್ತು ಪುನರ್ವಸತಿ ಜೊತೆಗೆ ಸುಧಾರಣೆಗೆ ಒತ್ತು ನೀಡಿದ್ದೇವೆ ಎಂದು ಅವರು ಹೇಳಿದರು.
ಭಾರತ ನೆಲದಲ್ಲಿ ಮೊದಲ ಸ್ವತಂತ್ರ ಸರ್ಕಾರವನ್ನು ಸ್ಥಾಪಿಸಿದ ನಮ್ಮ ನೇತಾಜಿಯವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಡಿಜಿಟಲ್ ರೂಪದಲ್ಲಿ ಸ್ಥಾಪಿಸಲಾಗುತ್ತಿದೆ. ಅತಿ ಶೀಘ್ರದಲ್ಲೇ ಈ ಹೊಲೊಗ್ರಾಮ್ ಪ್ರತಿಮೆಯನ್ನು ತೆಗೆದು ದೊಡ್ಡ ಗ್ರಾನೈಟ್ ಪ್ರತಿಮೆಯನ್ನು ಇಲ್ಲಿ ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.
ಈ ಪ್ರತಿಮೆ ಪ್ರಜಾಪ್ರಭುತ್ವ ಸಂಸ್ಥೆಗಳು, ಪ್ರಸ್ತುತ ಮತ್ತು ಮುಂಬರುವ ಪೀಳಿಗೆಗೆ ಅವರ ಕರ್ತವ್ಯಗಳನ್ನು ನೆನಪಿಸುತ್ತದೆ ಮತ್ತು ಅವರಿಗೆ ಸ್ಫೂರ್ತಿ ನೀಡುತ್ತದೆ ಎಂದು ಅವರು ಹೇಳಿದರು.
ಈ ಹೊಲೊಗ್ರಾಮ್ ಪ್ರತಿಮೆಯು 30,000 ಲ್ಯೂಮೆನ್ಸ್ 4K ಪ್ರೊಜೆಕ್ಟರ್‌ನಿಂದ ಚಾಲಿತವಾಗಲಿದೆ. ಹೊಲೊಗ್ರಾಮ್ ಪ್ರತಿಮೆ ಗಾತ್ರವು 28 ಅಡಿ ಎತ್ತರ ಮತ್ತು 6 ಅಡಿ ಅಗಲವಿದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ