ನವದೆಹಲಿ : ಇಲ್ಲಿನ ಸರಿತಾ ವಿಹಾರ್ನಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಐಸಿಯು ಬೆಡ್ ನೀಡಿಲ್ಲ ಎಂದು ಆರೋಪಿಸಿ ಸೋಂಕಿತರ ಕುಟುಂಬಸ್ಥರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಅಲ್ಲದೆ ಆಸ್ಪತ್ರೆಯ ಪೀಠೋಪಕರಣಗಳನ್ನು ನಾಶ ಮಾಡಲಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ಆರೋಪಿಸಿದ್ದಾರೆ. ಕೊರೊನಾ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಐಸಿಯು ಬೆಡ್ ನೀಡುತ್ತಿಲ್ಲ ಎಂದು ಆರೋಪಿಸಿ ವೈದ್ಯರ ಮೇಲೆ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಈ ಹಿನ್ನೆಲೆ ಸ್ಥಳದಲ್ಲಿ ಇದೀಗ ಪೊಲೀಸರ ಜಮಾವಣೆ ಮಾಡಲಾಗಿದೆ.
ಇದನ್ನೂ ಓದಿ: ಎನ್ಜಿಒ ಹೆಸರಲ್ಲಿ ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರುತ್ತಿದ್ದ ಮೂವರ ಬಂಧನ