ETV Bharat / bharat

ಆಗಸ್ಟ್ 14 ಇನ್ಮುಂದೆ 'ವಿಭಜನೆಯ ಭಯಾನಕತೆಯ ನೆನಪಿನ ದಿನ': ಪ್ರಧಾನಿ ಮೋದಿ - ಭಾರತ ಮತ್ತು ಪಾಕ್ ವಿಭಜನೆ

1947ರಲ್ಲಿ ಭಾರತ ಪಾಕ್ ವಿಭಜನೆಯ ನಂತರ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದು, ಅವರ ನೆನಪಿಗಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

August 14 to be observed as 'Partition Horrors Remembrance Day': PM
ಆಗಸ್ಟ್ 14 ಇನ್ಮುಂದೆ 'ವಿಭಜನೆಯ ಭಯಾನಕತೆಯ ನೆನಪಿನ ದಿನ': ಪ್ರಧಾನಿ ಮೋದಿ
author img

By

Published : Aug 14, 2021, 12:05 PM IST

ನವದೆಹಲಿ: ಆಗಸ್ಟ್ 14ರ ದಿನವನ್ನು ಇನ್ನು ಮುಂದೆ 'ವಿಭಜನೆಯ ಭಯಾನಕ ನೆನಪಿನ ದಿನ' (Partition Horrors Remembrance Day)ವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಇಂದು ಘೋಷಿಸಿದ್ದಾರೆ.

ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ನೀಡಿರುವ ಅವರು ವಿಭಜನೆಯ ನೋವನ್ನು ಮರೆಯಲು ಸಾಧ್ಯವಿಲ್ಲ ಎಂದಿದ್ದು, ವಿಭಜನೆಯ ವೇಳೆ ದೇಶದ ಜನತೆ ಅನುಭವಿಸಿದ ಕಷ್ಟದ ಮತ್ತು ತ್ಯಾಗಗಳನ್ನು ಸ್ಮರಿಸುವ ಸಲುವಾಗಿ ಈ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

  • May the #PartitionHorrorsRemembranceDay keep reminding us of the need to remove the poison of social divisions, disharmony and further strengthen the spirit of oneness, social harmony and human empowerment.

    — Narendra Modi (@narendramodi) August 14, 2021 " class="align-text-top noRightClick twitterSection" data=" ">

ವಿಭಜನೆಯ ನೋವನ್ನು ಮರೆಯಲು ಸಾಧ್ಯವಿಲ್ಲ, ಲಕ್ಷಾಂತರ ಮಂದಿ ಸಹೋದರ ಸಹೋದರಿಯರು ವಿಭಜನೆಯ ವೇಳೆ ಸ್ಥಳಾಂತರಗೊಂಡಿದ್ದಾರೆ. ದ್ವೇಷದ ಕಾರಣಕ್ಕೆ, ಹಿಂಸೆಗೆ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೋದಿ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಸ್ವಾತಂತ್ರ್ಯ ದಿನಕ್ಕೆ ಒಂದು ದಿನ ಮೊದಲು ಈ ಕುರಿತು ಮಾತನಾಡಿರುವ ಟ್ವೀಟ್ ಮಾಡಿರುವ ಅವರು, ಸಾಮಾಜಿಕ ವಿಭಜನೆ ಮತ್ತು ದ್ವೇಷದ ವಿಷವನ್ನು ತೆಗೆದುಹಾಕೋಣ, ಏಕತೆಯ ಸ್ಫೂರ್ತಿಯನ್ನು ಬಲಿಷ್ಠಗೊಳಿಸೋಣ ಎಂದು ರಾಷ್ಟ್ರದ ಜನತೆಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಭಾರತವನ್ನು ಹೊಗಳಿದ ತಾಲಿಬಾನ್, ಆದರೆ..?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.