ಔರೆಯಾ (ಉತ್ತರ ಪ್ರದೇಶ): ಇಲ್ಲಿನ ಬಿಜೆಪಿ ಶಾಸಕ ರಮೇಶ್ ದಿವಾಕರ್ ಎಂಬವರು ಕೊರೊನಾದಿಂದ ನಿಧನರಾಗಿದ್ದಾರೆ. ಇವರು ಉತ್ತರ ಪ್ರದೇಶದ ಔರೆಯಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಕೆಲ ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದ ಅವರು ಮೀರತ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಶಾಸಕರ ಸಾವಿನಿಂದ ತಾಲೂಕಿನಲ್ಲಿ ನೀರವ ಮೌನ ಆವರಿಸಿದೆ. ನಾಯಕನ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದಾರೆ.