ETV Bharat / bharat

ಒಂದೇ ಕುಟುಂಬದ ಐವರ ಕೊಲೆ ಪ್ರಕರಣ: ಮುಖ್ಯ ಆರೋಪಿ ಪೊಲೀಸರ ಬಲೆಗೆ

ಭೂ ವಿವಾದದ ಪ್ರಕರಣವೊಂದರಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಮುಖ್ಯ ಆರೋಪಿಗಳನ್ನು ಅಯೋಧ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ayodhya
ayodhya
author img

By

Published : May 24, 2021, 3:32 PM IST

ಅಯೋಧ್ಯ :ಭೂ ವಿವಾದದ ಪ್ರಕರಣವೊಂದರಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಮುಖ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕುಚೇರಾ ಕಾಡಿನಲ್ಲಿ ಆರೋಪಿಗಳ ಜೊತೆ ಗುಂಡಿನ ಚಕಮಕಿ ನಡೆದ ಬಳಿಕ ಅಯೋಧ್ಯೆಯ ಪೊಲೀಸರು ಒಂದೇ ಕುಟುಂಬದ ಐದು ಸದಸ್ಯರನ್ನು ಹತ್ಯೆ ಮಾಡಿದ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ಪವನ್ ಎಂಬಾತ ಎನ್​ಕೌಂಟರ್​ ವೇಳೆ ಗುಂಡು ಹಾರಿಸಿದ ಹಿನ್ನೆಲೆ ಒಬ್ಬ ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ. ನಂತರ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಅವರನ್ನು ಬಂಧಿಸಲಾಗಿದೆ.

ಆರೋಪಿ ಪವನ್ ಮತ್ತು ಮೂವರು ಸಹಚರರು ಭಾನುವಾರ ಮುಂಜಾನೆ ಇನ್ಯಾತ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೊರಿಲಾಲ್ ಅವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹೊರಿಲಾಲ್​ ಹೆಂಡತಿ ಹಾಗೂ ಮಕ್ಕಳು ಸೇರಿ ಐವರನ್ನು ಬರ್ಬರವಾಗಿ ಕೊಲೆಗೈದಿದ್ದರು. ಕೊಲೆಯಾದವರಲ್ಲಿ ಮೂವರು 10 ವರ್ಷದೊಳಗಿನ ಮಕ್ಕಳು ಸೇರಿದ್ದಾರೆ.

ಪ್ರಕರಣದ ಕುರಿತು ಮಾಹಿತಿ ನೀಡಿರುವ ಅಯೋಧ್ಯ ಎಸ್‌ಎಸ್‌ಪಿ ಶೈಲೇಶ್ ಪಾಂಡೆ, ಕೊಲೆ ನಡೆದ ಒಂದು ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲು ನಾವು ಅನೇಕ ತಂಡಗಳನ್ನು ರಚಿಸಿದ್ದೆವು. ಆರೋಪಿಗಳಲ್ಲಿ ನಾಲ್ವರನ್ನು ಘಟನೆ ನಡೆದ ದಿನವೇ ಬಂಧಿಸಲಾಗಿತ್ತು. ಇದೀಗ ಪ್ರಕರಣದ ಮುಖ್ಯ ಆರೋಪಿ ಪವನ್​ ನನ್ನು ಬಂಧಿಸಿರುವುದಾಗಿ ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.