ಹೈದರಾಬಾದ್, ತೆಲಂಗಾಣ: ತೆಲಂಗಾಣ ವಿಧಾನಸಭೆ ಚುನಾವಣೆ ರಂಗೇರುತ್ತಿದೆ. ಮುಂದಿನ ತಿಂಗಳು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 45 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಹೆಸರೂ ಇದೆ.
ಪಕ್ಷ ಘೋಷಿಸಿರುವ ಅಭ್ಯರ್ಥಿಗಳ ಪಟ್ಟಿಯ ಪ್ರಕಾರ ಅಜರುದ್ದೀನ್ ಅವರನ್ನು ಹೈದರಾಬಾದ್ ನಗರದ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಸದ್ಯ ಅವರು ಉತ್ತರ ಪ್ರದೇಶದ ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಕಾಂಗ್ರೆಸ್ನ ಎರಡನೇ ಪಟ್ಟಿಯಲ್ಲಿ ಆರು ಎಸ್ಟಿಗಳಿಗೆ ಸ್ಥಾನ ನೀಡಲಾಗಿದ್ದು, ಮೂವರು ಎಸ್ಸಿಗಳಿಗೆ ಟಿಕೆಟ್ ಕೊಡಲಾಗಿದೆ.
ತೆಲಂಗಾಣ ವಿಧಾನಸಭಾ ಚುನಾವಣೆಗೆ ಜುಬಿಲಿ ಹಿಲ್ಸ್ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಜೀ, ಸೋನಿಯಾ ಮೇಡಂ, ಪ್ರಿಯಾಂಕಾ ಗಾಂಧಿ ಮೇಡಂ, ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ನಾನು ಕೃತಜ್ಞನಾಗಿದ್ದೇನೆ. ಜುಬಿಲಿ ಹಿಲ್ಸ್‌ನಿಂದ ಕಣಕ್ಕಿಳಿಯುತ್ತಿರುವುದು ನನಗೆ ತುಂಬಾ ಸಂತೋಷವಾಗಿದೆ. ದೇವರ ಆಶೀರ್ವಾದದಿಂದ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತೇವೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೇಳಿದ್ದಾರೆ.
ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಶುಕ್ರವಾರ ನಡೆಯಿತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಸಿಇಸಿ ಸಭೆ ನಡೆಸಲಾಗಿತ್ತು. ಪಕ್ಷದ ಪ್ರಮುಖ ನಾಯಕರು ಸೋನಿಯಾ ಗಾಂಧಿ, ಸಲ್ಮಾನ್ ಖುರ್ಷಿದ್ ಸೇರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
2018 ರ ಹಿಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಈ ಹಿಂದೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಎಂದು ಕರೆಯಲ್ಪಡುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) 119 ಸ್ಥಾನಗಳಲ್ಲಿ 88 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತ್ತು. ಕಾಂಗ್ರೆಸ್ ಕೇವಲ 19 ಸ್ಥಾನಗಳಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿತ್ತು. ತೆಲಂಗಾಣ ವಿಧಾನಸಭೆಯ ಮತ ಎಣಿಕೆ ಡಿಸೆಂಬರ್ 3 ರಂದು ಇತರ ನಾಲ್ಕು ರಾಜ್ಯಗಳ ಮತ ಎಣಿಕೆಯೊಂದಿಗೆ ನಡೆಯಲಿದೆ.
ಓದಿ: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದ ನಾಯಕ ಮುಖ್ಯಮಂತ್ರಿ: ಅಮಿತ್ ಶಾ
ಇನ್ನು ಮೊಹಮ್ಮದ್ ಅಜರುದ್ದೀನ್ ಅವರು ಹೈದರಾಬಾದ್ ನಗರದ ಜುಬಿಲಿ ಹಿಲ್ಸ್ ಕ್ಷೇತ್ರದಿಂದ ಕಣಕ್ಕಿಳಿದ್ರೆ, ಲಾಲ್ ಬಹದ್ದೂರ್ ನಗರದಿಂದ ಮಾಜಿ ಸಂಸದೆ ಮಧು ಗೌರ್ ಯಕ್ಷಿ ಅವರಿಗೆ ಟಿಕೆಟ್ ನೀಡಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್) ವಿರುದ್ಧ ಸಿದ್ದಿಪೇಟೆ ಕ್ಷೇತ್ರದಿಂದ ಪೂಜಾಲ ಹರಿಕೃಷ್ಣ ಅವರಿಗೆ ಟಿಕೆಟ್ ನೀಡಲಾಗಿದೆ.