ಬಹದೂರ್ಗಡ್(ಹರಿಯಾಣ): ಕೈಗಾರಿಕಾ ಪ್ರದೇಶದಲ್ಲಿನ ಫ್ಯಾಕ್ಟರಿಯೊಂದರಲ್ಲಿ ಅನಿಲ ಸೋರಿಕೆಯಿಂದ ಭಾರಿ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ಕು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದರೆ, ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಳದ ಟ್ಯಾಂಕ್ವೊಂದನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಶಕ್ತಿ ಸಿಂಗ್ ಮಾಹಿತಿ ನೀಡಿದ್ದಾರೆ. ಆ ಟ್ಯಾಂಕ್ನಿಂದ ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರ ಸಂಬಂಧಿಕರನ್ನು ಸಂಪರ್ಕಿಸಲಾಗುವುದು ಮತ್ತು ಈ ಕುರಿತು ದೂರು ದಾಖಲಾದರೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ವಾಸೀಮ್ ಅಕ್ರಮ ಹೇಳಿದ್ದಾರೆ.
ಇಂದು ಬೆಳಗ್ಗೆ ಆಂಧ್ರಪ್ರದೇಶದ ಬಟ್ಟೆ ಕಾರ್ಖಾನೆಯೊಂದರಲ್ಲಿ ವಿಷಾನೀಲ ಸೋರಿಕೆಯಿಂದಾಗಿ 50ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.
ಇದನ್ನೂ ಓದಿ.. ಆಂಧ್ರದ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: 150ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ಅಸ್ವಸ್ಥ