ಇಂದೋರ್(ಮಧ್ಯಪ್ರದೇಶ): ಕಾಲೇಜ್ವೊಂದರಲ್ಲಿ ಆಯೋಜನೆ ಮಾಡಲಾಗಿದ್ದ ಗರ್ಬಾ ಡ್ಯಾನ್ಸ್ ವೇಳೆ ಬಜರಂಗ ದಳದ ಕಾರ್ಯಕರ್ತರು ಏಕಾಏಕಿ ನುಗ್ಗಿ ಗಲಾಟೆ ಮಾಡಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಇಂದೋರ್ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದ ಸೃಷ್ಟಿಸಿದ್ದಾರೆ.
ಗರ್ಬಾ ಡ್ಯಾನ್ಸ್ ಆಯೋಜನೆ ಮಾಡಿರುವ ಸಂಘಟಕರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಲವ್-ಜಿಹಾದ್ನಲ್ಲಿ ಭಾಗಿಯಾಗುವಂತೆ ಪ್ರೋತ್ಸಾಹಿಸುತ್ತಿದ್ದಾರೆಂದು ಬಜರಂಗದಳ ಆರೋಪ ಮಾಡಿದೆ. ಜೊತೆಗೆ ಕಾರ್ಯಕ್ರಮ ಆಯೋಜನೆ ಮಾಡಿರುವ ಸಂಘಟಕರು ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಭಾನುವಾರ ನಗರದ ಆಕ್ಸ್ಫರ್ಡ್ ಕಾಲೇಜ್ನಲ್ಲಿ ಸಮುದಾಯವೊಂದರ ಕೆಲ ವಿದ್ಯಾರ್ಥಿಗಳು ಗರ್ಭಾ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದರ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಬಜರಂಗದಳದ ಕಾರ್ಯಕರ್ತರು ಸ್ಥಳಕ್ಕಾಗಮಿಸಿ, ಲವ್ - ಜಿಹಾದ್ಗೆ ಕಾಲೇಜ್ ಆಡಳಿತ ಮಂಡಳಿ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿ ಗದ್ದಲ ಸೃಷ್ಟಿ ಮಾಡಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಜೊತೆಗೆ ಕಾಲೇಜ್ ನಿರ್ದೇಶಕ ಅಕ್ಷಯ್ ತಿವಾರಿ ಸೇರಿದಂತೆ ಹಲವರ ವಿರುದ್ಧ ದೂರು ದಾಖಲು ಮಾಡಿಕೊಂಡಿದ್ದಾರೆ. ಕಾರ್ಯಕ್ರಮ ಆಯೋಜನೆ ಮಾಡಿದ್ದ ಸ್ಥಳದಲ್ಲಿ ಶೇ. 50ಕ್ಕಿಂತಲೂ ಹೆಚ್ಚಿನ ಜನರಿಗ 4 ಅವಕಾಶ ನೀಡಿದ್ದಕ್ಕಾಗಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಕ್ಕಾಗಿ ದೂರು ದಾಖಲಾಗಿದೆ.
ಅಕ್ಟೋಬರ್ 7 ರಿಂದ ಒಂಬತ್ತು ದಿನಗಳ ಅವಧಿಯ ನವರಾತ್ರಿ ಉತ್ಸವ ಆರಂಭಗೊಂಡಿದ್ದು, ಈ ವೇಳೆ ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗರ್ಬಾ ಡ್ಯಾನ್ಸ್ ಮಾಡುವುದು ಸರ್ವೆ ಸಾಮಾನ್ಯವಾಗಿದೆ.