ETV Bharat / bharat

ಬಾಡಿಗೆ ಮನೆಯಲ್ಲಿ ಮೂವರು ಮಕ್ಕಳೊಂದಿಗೆ ವಾಸವಿದ್ದ ಬಾಂಗ್ಲಾದೇಶದ ಮಹಿಳೆ ಅರೆಸ್ಟ್​

ಉತ್ತರಾಖಂಡದ ಹರಿದ್ವಾರದಲ್ಲಿ ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದ ಬಾಂಗ್ಲಾದೇಶದ ಮಹಿಳೆಯನ್ನು ಬಂಧಿಸಲಾಗಿದೆ.

bangladeshi-woman-arrested-in-haridwar-living-without-visa-passport
ಬಾಡಿಗೆ ಮನೆಯಲ್ಲಿ ಮೂವರು ಮಕ್ಕಳೊಂದಿಗೆ ವಾಸವಿದ್ದ ಬಾಂಗ್ಲಾದೇಶದ ಮಹಿಳೆ ಅರೆಸ್ಟ್​
author img

By

Published : Oct 29, 2022, 8:14 PM IST

ಹರಿದ್ವಾರ (ಉತ್ತರಾಖಂಡ): ಪಾಸ್‌ಪೋರ್ಟ್ ಮತ್ತು ವೀಸಾ ಇಲ್ಲದೆ ತನ್ನ ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದ ಬಾಂಗ್ಲಾದೇಶದ ಮಹಿಳೆಯನ್ನು ಉತ್ತರಾಖಂಡದ ಹರಿದ್ವಾರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಕೊತ್ವಾಲಿ ರಾಣಿಪುರ ಪ್ರದೇಶದಲ್ಲಿ ರಹೀಮಾ ಎಂಬ ಬಾಂಗ್ಲಾದೇಶಿ ಮಹಿಳೆಯನ್ನು ಬಂಧಿಸಲಾಗಿದೆ. ಈಕೆ ದಾದುಪುರದಲ್ಲಿ ಉತ್ತರ ಪ್ರದೇಶದ ಪೊಲೀಸರು ಬಂಧಿಸಿರುವ ಬಾಂಗ್ಲಾದೇಶಿ ಅಲಿ ನೂರ್ ಎಂಬಾತನ ಪತ್ನಿ ಎಂದು ಹೇಳಲಾಗ್ತಿದೆ.

ಬಾಂಗ್ಲಾದೇಶದ ಮಹಿಳೆಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ಸೆಪ್ಟೆಂಬರ್ 2022ರಿಂದ ದಾದುಪುರ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಈ ಮಾಹಿತಿಯ ಆಧಾರದ ಸ್ಥಳೀಯ ಗುಪ್ತಚರ ಘಟಕದ ಸಿಬ್ಬಂದಿ ಮತ್ತು ಕೊತ್ವಾಲಿ ರಾಣಿಪುರ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಮಹಿಳೆ ಮೂವರು ಮಕ್ಕಳೊಂದಿಗೆ ಹರಿದ್ವಾರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದನ್ನು ಪತ್ತೆ ಬಂಧಿಸಿದ್ದಾರೆ.

ಬಂಧಿತ ಮಹಿಳೆಯು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮನೆ ಮೇಲೆ ದಾಳಿ ಸಂದರ್ಭದಲ್ಲಿ ಆಕೆಯ ಬಳಿ ಪಾಸ್‌ಪೋರ್ಟ್ ಅಥವಾ ವೀಸಾ ಯಾವುದೂ ಇರಲಿಲ್ಲ. ಇದರಿಂದ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದ್ಯ ಅಂತಾರಾಷ್ಟ್ರೀಯ ನಿಯಮಾವಳಿ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು, ಶಂಕಿತ ಉಗ್ರರ ನಂಟು ಆರೋಪದ ಮೇಲೆ ಬಾಂಗ್ಲಾದೇಶಿ ಅಲಿ ನೂರ್ ಎಂಬಾತನನ್ನು ಕೆಲ ದಿನ ಹಿಂದೆ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದು, ಈ ನಂಟಿನ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹಣಕ್ಕಾಗಿ ಮಗಳನ್ನೇ ಮಾರಿದ ಪಾಪಿ ತಂದೆ.. ಬಾಲಕಿ ಖರೀದಿಸಿ ವೇಶ್ಯಾವಾಟಿಕೆಗೆ ತಳ್ಳಿದ್ದ ಸಂಬಂಧಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.