ಸಾರ್ವಜನಿಕ ವಲಯದ ಬ್ಯಾಂಕ್ ಆಗಿ ಗುರುತಿಸಿಕೊಂಡಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರ ವಿವಿಧ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶದ ವಿವಿಧೆಡೆಯಲ್ಲಿರುವ ಬ್ರಾಂಚ್ಗಳಲ್ಲಿ ಸ್ಕೇಲ್ 2 ಮತ್ತು 3 ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕದ ಕೆಲವು ಬ್ರಾಂಚ್ಗಳಲ್ಲೂ ಅಗತ್ಯಕ್ಕೆ ಅನುಗುಣವಾಗಿ ಈ ಹುದ್ದೆ ನೇಮಕಾತಿ ನಡೆಸಲಾಗುವುದು. ಈ ಹಿನ್ನೆಲೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಆಫೀಸರ್ ಸ್ಕೇಲ್ 1ಕ್ಕೆ 300 ಹುದ್ದೆ, ಆಫೀಸರ್ ಸ್ಕೇಲ್ 3ಕ್ಕೆ 100 ಹುದ್ದೆಗಳನ್ನು ನಿಗದಿಪಡಿಸಿದ್ದು, ಇತರೆ ವಿಭಾಗದಲ್ಲಿ 14 ಹುದ್ದೆಗಳು ಖಾಲಿ ಇವೆ. ಒಟ್ಟಾರೆ 414 ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸಿಸಿ, ಸಿಎಂಎ, ಪದವಿ, ಬಿಇ, ಎಂಸಿಎ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
![ಅಧಿಸೂಚನೆ](https://etvbharatimages.akamaized.net/etvbharat/prod-images/13-07-2023/bank-of-maharashtra_1307newsroom_1689235376_358.jpg)
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಆಗಿದ್ದು, ಗರಿಷ್ಠ 38 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 118 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಇತರೆ ಅಭ್ಯರ್ಥಿಗಳಿಗೆ 1180 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ಈ ಹುದ್ದೆಗಳಿಗೆ 48,170 ರೂ ನಿಂದ 1,00,350 ರೂ. ವರೆಗೆ ವೇತನ ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಕೆ ಜುಲೈ 13ರಿಂದ ಆರಂಭ ಆಗಿದ್ದು, ಜುಲೈ 25 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು https://ibpsonline.ibps.in/bmcgomay23/ ಈ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ವಿವರ, ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ವೀಕ್ಷಣೆಗೆ ಅಭ್ಯರ್ಥಿಗಳು bankofmaharashtra.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಸೆಂಟ್ರಲ್ ಬ್ಯಾಂಕ್ ನೇಮಕಾತಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ 1000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ತನ್ನ 4500 ಬ್ರಾಂಚ್ಗಳಲ್ಲಿ ಖಾಲಿ ಇರುವ ಮುಖ್ಯವಾಹಿನಿಯ ಮ್ಯಾನೇಜರ್ ಹುದ್ದೆ ನೇಮಕಾತಿಗೆ ಆದೇಶ ಹೊರಡಿಸಿದೆ. ಗ್ರೇಡ್ ಸ್ಕೇಲ್ 2 ಹುದ್ದೆಗಳು ಇವಾಗಿದ್ದು, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 15 ಆಗಿದೆ.
ಮಿಡಲ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್ 2ನ 1000 ಮ್ಯಾನೇಜರ್ ಹುದ್ದೆ ನೇಮಕಾತಿ ನಡೆಯಲಿದ್ದು, ಮಾಸಿಕ 69,810 ರೂ. ವೇತನ ನಿಗದಿಸಲಾಗಿದೆ. ಗರಿಷ್ಠ 32 ವರ್ಷ ವಯೋಮಿತಿಯನ್ನು ಈ ಹುದ್ದೆಗೆ ನಿಗದಿಪಡಿಸಲಾಗಿದೆ. ಈ ಬ್ಯಾಂಕಿಂಗ್ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಜಾಲತಾಣ centralbankofindia.co.in ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: SSC Jobs: 1,558 ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದ್ರೆ ಸಾಕು