ETV Bharat / bharat

ಖಾಸಗೀಕರಣ ವಿರೋಧಿಸಿ ಎರಡು ದಿನಗಳ ಮುಷ್ಕರ: ದೇಶಾದ್ಯಂತ ಬ್ಯಾಂಕ್ ಸೇವೆಗಳು ಬಂದ್​​

author img

By

Published : Dec 16, 2021, 7:43 PM IST

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಇಂಡಿಯಾದಂತಹ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಹಲವು ಶಾಖೆಗಳು ಇಂದು ಬಂದ್​ ಆಗಿದ್ದು, ಗ್ರಾಹಕರಿಗೆ ಮುಷ್ಕರದ ಬಿಸಿ ತಟ್ಟಿದೆ.

bank-services-affected-across-the-country-due-to-two-day-strike-of-government-bank-employees
ದೇಶಾದ್ಯಂತ ಬ್ಯಾಂಕ್ ಸೇವೆಗಳು ಬಂದ್​​

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣವನ್ನು ವಿರೋಧಿಸಿ ಉದ್ಯೋಗಿಗಳು ಎರಡು ದಿನಗಳ ಮುಷ್ಕರ ಆರಂಭಿಸಿದ್ದು, ದೇಶಾದ್ಯಂತ ಇಂದು ಬ್ಯಾಂಕ್‌ಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಇಂಡಿಯಾದಂತಹ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಹಲವು ಶಾಖೆಗಳು ಇಂದು ಬಂದ್​ ಆಗಿದ್ದು, ಗ್ರಾಹಕರಿಗೆ ಮುಷ್ಕರದ ಬಿಸಿ ತಟ್ಟಿದೆ.

ನಾಳೆಯೂ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (AIBOC), ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ (AIBEA) ಮತ್ತು ರಾಷ್ಟ್ರೀಯ ಬ್ಯಾಂಕ್ ನೌಕರರ ಸಂಘಟನೆ (NOBW) ಸೇರಿದಂತೆ ಒಂಬತ್ತು ಬ್ಯಾಂಕ್ ಒಕ್ಕೂಟಗಳ ವೇದಿಕೆಯಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಈ ಮುಷ್ಕರಕ್ಕೆ ಕರೆ ನೀಡಿದೆ.

ಈ ಮುಷ್ಕರ ಶಾಖೆಗಳಲ್ಲಿ ಠೇವಣಿ ಮತ್ತು ಹಿಂಪಡೆಯುವಿಕೆ, ಚೆಕ್ ಕ್ಲಿಯರಿಂಗ್ ಮತ್ತು ಸಾಲ ಮಂಜೂರಾತಿ ಮುಂತಾದ ಸೇವೆಗಳ ಮೇಲೆ ಪರಿಣಾಮ ಬೀರಿದೆ. ಆದರೆ, ಹಲವೆಡೆ ಎಟಿಎಂಗಳು ಕಾರ್ಯನಿರ್ವಹಿಸುತ್ತಿವೆ. ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ಅವರ ಪ್ರಕಾರ, ಇಂದು 18,600 ಕೋಟಿ ರೂಪಾಯಿ ಮೌಲ್ಯದ 20.4 ಲಕ್ಷ ಚೆಕ್‌ಗಳನ್ನು ಒಳಗೊಂಡ ವಹಿವಾಟು ನಡೆಸಲಾಗಲಿಲ್ಲವಂತೆ.

ಮುಷ್ಕರದಿಂದಾಗಿ ತಮ್ಮ ಶಾಖೆಗಳಲ್ಲಿನ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಎಸ್‌ಬಿಐ ಸೇರಿದಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಈಗಾಗಲೇ ಗ್ರಾಹಕರಿಗೆ ಮಾಹಿತಿ ನೀಡಿವೆ. ಆದರೆ, ಖಾಸಗಿ ವಲಯದ ಬ್ಯಾಂಕ್‌ಗಳಾದ ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಕೊಟಕ್ ಮಹೀಂದ್ರಾ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಿವೆ.

ಇದನ್ನೂ ಓದಿ: ರಾಜ್ಯದಲ್ಲಿ ಮುದುಡುತ್ತಿರುವ ಕಮಲ: ಬಿಎಸ್​ವೈಗೆ ಮತ್ತಷ್ಟು ಪವರ್ ನೀಡಲು ಹೈಕಮಾಂಡ್ ಚಿತ್ತ..?

ಮತ್ತೊಂದೆಡೆ ಮುಂಬೈನ ಆಜಾದ್ ಮೈದಾನದಲ್ಲಿ 5,000 ಬ್ಯಾಂಕ್ ಉದ್ಯೋಗಿಗಳು ಪ್ರತಿಭಟನೆ ನಡೆಸಿದ್ದಾರೆ ಎಂದು ಮಹಾರಾಷ್ಟ್ರದ ಯುಎಫ್‌ಬಿಯು ರಾಜ್ಯ ಸಂಯೋಜಕ ದೇವಿದಾಸ್ ತುಳಜಾಪುರಕರ್ ಹೇಳಿದ್ದಾರೆ. ಸ್ವಚ್ಛತಾ ಕಾರ್ಮಿಕರಿಂದ ಹಿಡಿದು ಹಿರಿಯ ಅಧಿಕಾರಿಗಳವರೆಗೆ ಎಲ್ಲ ವರ್ಗದ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದಿದ್ದಾರೆ. ಚೆನ್ನೈನಲ್ಲಿ ಬ್ಯಾಂಕ್ ಉದ್ಯೋಗಿಗಳ ಒಂದು ವಿಭಾಗವು ಕಪ್ಪು ಬ್ಯಾಡ್ಜ್ ಧರಿಸಿ ಪ್ರತಿಭಟನೆ ನಡೆಸಿದೆ ಮತ್ತು ಕೇಂದ್ರದ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗಿದೆ.

ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಬ್ಯಾಂಕ್ ನೌಕರರು ಅಂಬೇಡ್ಕರ್ ವೃತ್ತದ ಬಳಿಯ ಎಸ್​​ಬಿಐ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು. ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮ್ಯಾ ದತ್ತಾ ಮಾತನಾಡಿ, ಎರಡು ದಿನಗಳ ಮುಷ್ಕರದಲ್ಲಿ ದೇಶಾದ್ಯಂತ ಸುಮಾರು ಏಳು ಲಕ್ಷ ಬ್ಯಾಂಕ್ ಉದ್ಯೋಗಿಗಳು ಭಾಗವಹಿಸುತ್ತಿದ್ದಾರೆ. ಸರ್ಕಾರದ ಧೋರಣೆಯಿಂದಾಗಿ ಮುಷ್ಕರದಿಂದ ಒಂದು ಲಕ್ಷಕ್ಕೂ ಹೆಚ್ಚು ಬ್ಯಾಂಕ್ ಶಾಖೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿರುವುದು ದುರದೃಷ್ಟಕರ ಎಂದಿದ್ದಾರೆ.

ಕಾಂಗ್ರೆಸ್, ಡಿಎಂಕೆ, ಸಿಪಿಐ, ಸಿಪಿಐ(ಎಂ), ತೃಣಮೂಲ ಕಾಂಗ್ರೆಸ್, ಎನ್‌ಸಿಪಿ, ಶಿವಸೇನೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಮುಷ್ಕರಕ್ಕೆ ಬೆಂಬಲ ನೀಡಿವೆ ಎಂದು ವೆಂಕಟಾಚಲಂ ಹೇಳಿದ್ದಾರೆ.

ಫೆಬ್ರವರಿಯಲ್ಲಿ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದ ಹೂಡಿಕೆ ಹಿಂತೆಗೆದುಕೊಳ್ಳುವ ಯೋಜನೆಯ ಭಾಗವಾಗಿ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣವನ್ನು ಘೋಷಿಸಿದ್ದರು. ಖಾಸಗೀಕರಣವನ್ನು ಸುಲಭಗೊಳಿಸಲು, ಸರ್ಕಾರವು ಸಂಸತ್ತಿನಲ್ಲಿ ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ, 2021 ಅನ್ನು ಅಂಗೀಕರಿಸಿದ್ದು, ಪ್ರಸ್ತುತ ಅಧಿವೇಶನದಲ್ಲಿ ಪ್ರಸ್ತುತಪಡಿಸಲು ಮತ್ತು ರವಾನಿಸಲು ಪಟ್ಟಿಮಾಡಿಟ್ಟುಕೊಳ್ಳಲಾಗಿದೆ.

ಸರ್ಕಾರವು ಈ ಹಿಂದೆ 2019 ರಲ್ಲಿ IDBI ನಲ್ಲಿ ತನ್ನ ಬಹುಪಾಲು ಪಾಲನ್ನು LIC ಗೆ ಮಾರಾಟ ಮಾಡುವ ಮೂಲಕ ಬ್ಯಾಂಕ್ ಅನ್ನು ಖಾಸಗೀಕರಣಗೊಳಿಸಿತ್ತು. ಮತ್ತು ಕಳೆದ ನಾಲ್ಕು ವರ್ಷಗಳಲ್ಲಿ 14 ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ವಿಲೀನಗೊಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.