ಹೈದರಾಬಾದ್/ ನವದೆಹಲಿ : ಬಿಲ್ಕಿಸ್ ಬಾನೊ ಪ್ರಕರಣದಲ್ಲಿ 11 ಅಪರಾಧಿಗಳು ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ. ಬಿಲ್ಕಿಸ್ ಬಾನೊ ಅವರ ಅವಿರತ ಹೋರಾಟವು ಸೊಕ್ಕಿನ ಬಿಜೆಪಿ ಸರ್ಕಾರದ ವಿರುದ್ಧ ನ್ಯಾಯಕ್ಕೆ ಸಂದಿರುವ ಜಯ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, 'ಚುನಾವಣಾ ಲಾಭಕ್ಕಾಗಿ ನ್ಯಾಯವನ್ನು ಕೊಲ್ಲುವ ಪ್ರವೃತ್ತಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಸುಪ್ರೀಂ ಕೋರ್ಟ್ನ ತೀರ್ಪು ಇಂದು ಅಪರಾಧಿಗಳನ್ನು ಪೋಷಿಸುತ್ತಿರುವವರು ಯಾರು ಎಂಬುದನ್ನು ದೃಢಪಡಿಸಿದೆ. ಬಿಲ್ಕಿಸ್ ಬಾನೋ ಅವರ ಅವಿರತ ಹೋರಾಟವು ಬಿಜೆಪಿ ಸರ್ಕಾರದ ವಿರುದ್ಧ ನ್ಯಾಯಕ್ಕೆ ಸಂದಿರುವ ಜಯ' ಎಂದು ಹೇಳಿದ್ದಾರೆ.
-
चुनावी फायदे के लिए ‘न्याय की हत्या’ की प्रवृत्ति लोकतांत्रिक व्यवस्था के लिए खतरनाक है।
— Rahul Gandhi (@RahulGandhi) January 8, 2024 " class="align-text-top noRightClick twitterSection" data="
आज सुप्रीम कोर्ट के फैसले ने एक बार फिर देश को बता दिया कि ‘अपराधियों का संरक्षक’ कौन है।
बिलकिस बानो का अथक संघर्ष, अहंकारी भाजपा सरकार के विरुद्ध न्याय की जीत का प्रतीक है।
">चुनावी फायदे के लिए ‘न्याय की हत्या’ की प्रवृत्ति लोकतांत्रिक व्यवस्था के लिए खतरनाक है।
— Rahul Gandhi (@RahulGandhi) January 8, 2024
आज सुप्रीम कोर्ट के फैसले ने एक बार फिर देश को बता दिया कि ‘अपराधियों का संरक्षक’ कौन है।
बिलकिस बानो का अथक संघर्ष, अहंकारी भाजपा सरकार के विरुद्ध न्याय की जीत का प्रतीक है।चुनावी फायदे के लिए ‘न्याय की हत्या’ की प्रवृत्ति लोकतांत्रिक व्यवस्था के लिए खतरनाक है।
— Rahul Gandhi (@RahulGandhi) January 8, 2024
आज सुप्रीम कोर्ट के फैसले ने एक बार फिर देश को बता दिया कि ‘अपराधियों का संरक्षक’ कौन है।
बिलकिस बानो का अथक संघर्ष, अहंकारी भाजपा सरकार के विरुद्ध न्याय की जीत का प्रतीक है।
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, 'ಅಂತಿಮವಾಗಿ ನ್ಯಾಯ ಗೆದ್ದಿದೆ. ಗುಜರಾತ್ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದ ಈ ಆದೇಶದಿಂದ ಬಿಜೆಪಿಯ ಮಹಿಳಾ ವಿರೋಧಿ ನೀತಿಯ ಮುಸುಕು ಸರಿದಿದೆ. ಈ ಆದೇಶದ ಬಳಿಕ ನ್ಯಾಯ ವ್ಯವಸ್ಥೆಯಲ್ಲಿನ ಸಾರ್ವಜನಿಕರ ವಿಶ್ವಾಸ ಮತ್ತಷ್ಟು ಬಲಗೊಂಡಿದೆ. ತನ್ನ ಹೋರಾಟವನ್ನು ಧೈರ್ಯದಿಂದ ನಡೆಸಿದ ಬಿಲ್ಕಿಸ್ ಬಾನೋ ಅವರಿಗೆ ಅಭಿನಂದನೆ' ಎಂದು ತಿಳಿಸಿದ್ದಾರೆ.
-
अंततः न्याय की जीत हुई है। सुप्रीम कोर्ट ने गुजरात दंगों के दौरान गैंगरेप की शिकार #BilkisBano के आरोपियों की रिहाई रद्द कर दी है। इस आदेश से भारतीय जनता पार्टी की महिला विरोधी नीतियों पर पड़ा हुआ पर्दा हट गया है। इस आदेश के बाद जनता का न्याय व्यवस्था के प्रति विश्वास और मजबूत…
— Priyanka Gandhi Vadra (@priyankagandhi) January 8, 2024 " class="align-text-top noRightClick twitterSection" data="
">अंततः न्याय की जीत हुई है। सुप्रीम कोर्ट ने गुजरात दंगों के दौरान गैंगरेप की शिकार #BilkisBano के आरोपियों की रिहाई रद्द कर दी है। इस आदेश से भारतीय जनता पार्टी की महिला विरोधी नीतियों पर पड़ा हुआ पर्दा हट गया है। इस आदेश के बाद जनता का न्याय व्यवस्था के प्रति विश्वास और मजबूत…
— Priyanka Gandhi Vadra (@priyankagandhi) January 8, 2024अंततः न्याय की जीत हुई है। सुप्रीम कोर्ट ने गुजरात दंगों के दौरान गैंगरेप की शिकार #BilkisBano के आरोपियों की रिहाई रद्द कर दी है। इस आदेश से भारतीय जनता पार्टी की महिला विरोधी नीतियों पर पड़ा हुआ पर्दा हट गया है। इस आदेश के बाद जनता का न्याय व्यवस्था के प्रति विश्वास और मजबूत…
— Priyanka Gandhi Vadra (@priyankagandhi) January 8, 2024
ಕಾಂಗ್ರೆಸ್ ನಾಯಕ ಪವನ್ ಖೇರಾ ಎಕ್ಸ್ನಲ್ಲಿ ಪ್ರತಿಕ್ರಿಯಿಸಿ, 'ಸುಪ್ರೀಂ ಕೋರ್ಟ್ ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿರುವುದು ಸ್ವಾಗತಾರ್ಹ. ಇದು ಗುಜರಾತ್ ಬಿಜೆಪಿ ಸರ್ಕಾರದ ಮಹಿಳೆಯರ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದೆ. ಈ ತೀರ್ಪಿನಿಂದ ಅಪರಾಧಿಗಳ ಬಿಡುಗಡೆಗೆ ಸಹಕರಿಸಿದವರಿಗೆ ಮತ್ತು ಅಪರಾಧಿಗಳಿಗೆ ಹಾರ ಹಾಕಿ ಸ್ವಾಗತ ಕೋರಿದವರಿಗೆ ಕಪಾಳ ಮೋಕ್ಷ ಮಾಡಿದಂತಾಗಿದೆ' ಎಂದು ಬರೆದುಕೊಂಡಿದ್ದಾರೆ.
ಬಿಲ್ಕಿಸ್ ಬಾನೊ ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗುಜರಾತ್ ಸರ್ಕಾರ ಬಿಡುಗಡೆಗೊಳಿಸಿ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಲಾಗಿದೆ. ಮುಂದಿನ ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ.
ಬಿಲ್ಕಿಸ್ ಬಾನೊ ಪ್ರಕರಣದಲ್ಲಿ, ಕಾನೂನಿನ ನಿಯಮಗಳನ್ನು ಜಾರಿಗೊಳಿಸುವಾಗ ಸಹಾನುಭೂತಿ ಯಾವುದೇ ಪಾತ್ರವಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಜೊತೆಗೆ ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ರದ್ದುಗೊಳಿಸಿದ ನಂತರ, 11 ಜನ ಅಪರಾಧಿಗಳು ಎರಡು ವಾರದೊಳಗಾಗಿ ಜೈಲು ಅಧಿಕಾರಿಗಳ ಮುಂದೆ ಶರಣಾಗಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ.
ಇದನ್ನೂ ಓದಿ : ಬಿಲ್ಕಿಸ್ ಬಾನೊ ಪ್ರಕರಣ: 11 ಅಪರಾಧಿಗಳ ಬಿಡುಗಡೆ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು