ಬರೇಲಿ (ಉತ್ತರ ಪ್ರದೇಶ): 5 ಯುವಕರು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ತನಿಖೆ ನಡೆಯುತ್ತಿದೆ.
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ 5 ಯುವಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಅಪ್ರಾಪ್ತೆ ಈ ಕುರಿತು ದೂರು ಸಲ್ಲಿಸಿದ್ದು, ಯುವಕನೋರ್ವ ಮದುವೆಯಾಗುವುದಾಗಿ ನಂಬಿಸಿ ನನ್ನೊಂದಿಗೆ ಸಂಪರ್ಕದಲ್ಲಿದ್ದ. ಕೆಲ ಖಾಸಗಿ ಕ್ಷಣದ ವಿಡಿಯೋ ಕೂಡ ಮಾಡಿಕೊಂಡಿದ್ದ. ಅದನ್ನು ಇಟ್ಟುಕೊಂಡು ನನಗೆ ಬೆದರಿಕೆ ಹಾಕಿ ಬಳಿಕ ಆತನ ಸ್ನೇಹಿತರೊಂದಿಗೆ ಜೊತೆಗೂಡಿ ತನ್ನನ್ನು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆಂದು ತಿಳಿಸಿದ್ದಾಳೆ.
ಈ ಸುದ್ದಿಯನ್ನೂ ಓದಿ: ಮಮತಾ ಬ್ಯಾನರ್ಜಿ "ಅಸಂಬದ್ಧ" ಹೇಳಿಕೆಯಿಂದ ದೂರವಿರಬೇಕು: ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ
ಈ ಕುರಿತು ಎಎಸ್ಪಿ ಸತ್ಯನಾರಾಯಣ ಪ್ರತಿಕ್ರಿಯಿಸಿದ್ದು, ಅಪ್ರಾಪ್ತೆಯು ಯುವಕನ ಮಾತುಗಳನ್ನು ನಂಬಿ ಮೋಸ ಹೋಗಿದ್ದಾಳೆಂದು ದೂರಿನಲ್ಲಿ ತಿಳಿಸಿದ್ದಾಳೆ. ಯುವಕನೊಂದಿಗಿನ ಖಾಸಗಿ ವಿಡಿಯೋ ಇಟ್ಟುಕೊಂಡು, ಬೆದರಿಕೆ ಒಡ್ಡಿ ಬಳಿಕ ಆತ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸಾಮೂಹಿಕ ಅತ್ಯಾಚಾರದ ವಿಡಿಯೋ ಮಾಡಿದ್ದಲ್ಲದೇ ಅದನ್ನು ವೈರಲ್ ಕೂಡ ಮಾಡಿದ್ದಾರೆಂದು ತಿಳಿಸಿದರು.
ಸದ್ಯ ಈ ಕುರಿತು ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.