ETV Bharat / bharat

ಕೋವಿಡ್ ಪ್ರೋಟೋಕಾಲ್ ಪಾಲನೆ.. ಲಸಿಕೆ ಪಡೆದು ಪ್ರತಿಭಟನೆ ಮುಂದುವರಿಸಿದ ರೈತರು! - ರೈತರ ಪ್ರತಿಭಟನೆ

ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾರಣಾಂತಿಕ ವೈರಸ್ ಹರಡುವುದನ್ನು ತಡೆಗಟ್ಟಲು ಪ್ರೋಟೋಕಾಲ್ ಅನುಸರಿಸಲು ಒಪ್ಪಿದ್ದಾರೆ. ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ಕೊರೊನಾ ವೈರಸ್ ವಿರುದ್ಧ ಲಸಿಕೆ ತೆಗೆದುಕೊಳ್ಳಲು ಅವರು ಒಪ್ಪಿದ್ದಾರೆ. ಅಲ್ಲದೆ, ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

Tikri border
Tikri border
author img

By

Published : Apr 26, 2021, 10:04 PM IST

ಟಿಕ್ರಿ ಗಡಿ (ದೆಹಲಿ): ಕೋವಿಡ್ -19 ಪ್ರಕರಣಗಳು ಮಾರಣಾಂತಿಕ ಆಗುತ್ತಿರುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಇನ್ನೂ ಒಂದು ವಾರದವರೆಗೆ ಲಾಕ್‌ಡೌನ್ ವಿಸ್ತರಿಸಲು ಒತ್ತಾಯಗಳು ಕೇಳಿಬರುತ್ತಿವೆ. ಹೀಗಾಗಿ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾರಣಾಂತಿಕ ವೈರಸ್ ಹರಡುವುದನ್ನು ತಡೆಗಟ್ಟಲು ಕೋವಿಡ್​ ನಿಯಮಗಳನ್ನು ಪಾಲಿಸಲು ಒಪ್ಪಿದ್ದಾರೆ.

ಅಲ್ಲದೆ, ಪ್ರತಿಭಟನಾ ಸ್ಥಳದಲ್ಲಿ ಕೊರೊನಾ ವೈರಸ್ ಲಸಿಕೆ ತೆಗೆದುಕೊಳ್ಳಲು ಅವರು ಒಪ್ಪಿಗೆ ಸೂಚಿಸುವುದರೊಂದಿಗೆ ಪ್ರತಿಭಟನೆಯನ್ನೂ ಮುಂದುವರಿಸುವುದಾಗಿ ಘೋಷಿಸಿದ್ದಾರೆ. "ಒಂದೋ ನಾವು ಈ ಯುದ್ಧವನ್ನು ಗೆಲ್ಲುತ್ತೇವೆ ಅಥವಾ ನಾವು ಅನಿರ್ದಿಷ್ಟ ಅವಧಿಗೆ ಇಲ್ಲಿ ಕುಳಿತುಕೊಳ್ಳುತ್ತೇವೆ" ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಇಪ್ಪತ್ತಕ್ಕೂ ಹೆಚ್ಚು ಚುನಾವಣಾ ರ್ಯಾಲಿಗಳಲ್ಲಿ ಮಾರ್ಗಸೂಚಿಗಳನ್ನು ಪಾಲಿಸದೆ ಭಾಗಿಯಾಗದ್ದರು. ಆದರೆ ಈಗ ಅವರು ನಮ್ಮತ್ತ ಬೆರಳು ತೋರಿಸುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.