ETV Bharat / bharat

ಬಾಂಗ್ಲಾದೇಶದಲ್ಲಿ ಹಿಂಸಾಚಾರ: 5ಕ್ಕೆ ಏರಿದ ಸಾವಿನ ಸಂಖ್ಯೆ

ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

B'desh violence: Death toll rises to 5 after another man succumb to injuries
ಬಾಂಗ್ಲಾದೇಶದಲ್ಲಿ ಹಿಂಸಾಚಾರ: 5ಕ್ಕೆ ಏರಿದ ಸಾವಿನ ಸಂಖ್ಯೆ
author img

By

Published : Oct 20, 2021, 4:10 AM IST

ಢಾಕಾ, ಬಾಂಗ್ಲಾದೇಶ: ಕೋಮು ಹಿಂಸಾಚಾರ ಬಾಂಗ್ಲಾದೇಶದಲ್ಲಿ ಸಾಕಷ್ಟು ಸಾವು-ನೋವುಗಳಿಗೆ ಕಾರಣವಾಗಿದೆ. ಪೊಲೀಸರು ಮತ್ತು ದಾಳಿಕೋರರ ನಡುವಿನ ಘರ್ಷಣೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಚಾಂದ್ಪುರದ ಹಾಜಿಗಂಜ್​ನ ಲಕ್ಷ್ಮೀ ನಾರಾಯಣ ಅಖ್ರಾ ದೇವಸ್ಥಾನದ ಬಳಿ ಈ ಘರ್ಷಣೆ ನಡೆದಿದ್ದು, ಗಾಯಗೊಂಡಿದ್ದ ವ್ಯಕ್ತಿಗಳಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ಹಾಜಿಗಂಜ್ ಪೊಲೀಸ್ ಠಾಣೆಯ ಅಧಿಕಾರಿ ಎಂ.ಡಿ.ಹರುನೂರ್ ರಶೀದ್ ಹೇಳಿಕೆಯನ್ನು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಮೊದಲಿಗೆ ಗಾಯಾಳುವನ್ನು ಕೊಮಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಢಾಕಾದ ವೈದ್ಯಕೀಯ ಕಾಲೇಜು ಆಸ್ಪತ್ರೆ (DMCH) ರವಾನೆ ಮಾಡಲಾಗಿತ್ತು.

ಇದಕ್ಕೂ ಮೊದಲು ಚಾಂದ್ಪುರದ ಹಾಜಿಗಂಜ್​ನಲ್ಲಿ ದುರ್ಗಾಪೂಜೆ ಸಂಭ್ರಮದ ವೇಳೆ ಹಿಂಸಾಚಾರ ನಡೆದಿದ್ದು, ಮೂವರು ಸಾವನ್ನಪ್ಪಿ ಪೊಲೀಸರು, ಪತ್ರಕರ್ತರು, ಸಾಮಾನ್ಯ ನಾಗರಿಕರು ಸೇರಿ 60 ಮಂದಿ ಗಾಯಗೊಂಡಿದ್ದರು.

ಇದಾದ ನಂತರ ದುರ್ಗಾಪೂಜೆ ನಡೆಯುವ ಸ್ಥಳದಲ್ಲಿ ಪವಿತ್ರ ಕುರಾನ್ ಅನ್ನು ಅಪವಿತ್ರಗೊಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹರಿದಾಡಿದ್ದು,ಈ ಸುದ್ದಿ ದೇಶಾದ್ಯಂತ ಹಿಂಸಾಚಾರ ಸೃಷ್ಟಿಗೆ ಕಾರಣವಾಗಿತ್ತು.

ಚಾಂದ್ಪುರ, ಚಿತ್ತಗಾಂಗ್, ಗಾಜಿಪುರ, ಬಂದರ್‌ಬನ್, ಚಪೈನವಾಬ್​ಗಂಜ್ ಮತ್ತು ಮೌಲ್ವಿಬಜಾರ್ ಪ್ರದೇಶದಲ್ಲಿರುವ ಹಿಂದೂ ದೇವಾಲಯಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ವಿಗ್ರಹಗಳನ್ನು ಧ್ವಂಸಗೊಳಿಸಿದ್ದರು ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿತ್ತು.

ಪ್ರಸ್ತುತ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 71 ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದ 450ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ವಿಮಾನದಲ್ಲಿ ನಟಿಯೊಂದಿಗೆ ಅಸಭ್ಯ ವರ್ತನೆ: ಉದ್ಯಮಿ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.