ಕೋಲ್ಕತ್ತಾ(ಪಶ್ಚಿಮ ಬಂಗಾಳ): ಹಿರಿಯ ರಾಜಕಾರಣಿ, ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮಾಜಿ ಸಚಿವ ಸಾಧನ್ ಪಾಂಡೆ ಮುಂಬೈ ಮೂಲದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಈ ಮಾಹಿತಿಯನ್ನು ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಪಾಂಡೆ ಅವರಿಗೆ 71 ವರ್ಷ ವಯಸ್ಸಾಗಿತ್ತು. ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದಲ್ಲಿ ಗ್ರಾಹಕ ವ್ಯವಹಾರಗಳು, ಸ್ವ-ಸಹಾಯ ಗುಂಪು ಮತ್ತು ಸ್ವಯಂ ಉದ್ಯೋಗ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮೇ 2011 ರಿಂದ ನವೆಂಬರ್ 2021 ರವರೆಗೆ ಅಧಿಕಾರ ನಡೆಸಿದ್ದರು.
ಇದನ್ನೂ ಓದಿ: ಇಂದೋರ್‌ನಲ್ಲಿ 550 ಟನ್ ಸಾಮರ್ಥ್ಯದ 'ಗೋಬರ್-ಧನ್' ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ
ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್‌ನೊಂದಿಗೆ ಪ್ರಾರಂಭಿಸಿದ್ದ ಅವರು ನಂತರದ ದಿನಗಳಲ್ಲಿ ಅಂದರೆ 1998 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು.