ETV Bharat / bharat

ಬಿಜೆಪಿ ತೊರೆದ ಬೆಂಗಾಳದ ಜನಪ್ರಿಯ ನಟಿ ಶ್ರಬಂತಿ ಚಟರ್ಜಿ

ಕಳೆದ ಕೆಲವು ತಿಂಗಳ ಹಿಂದೆ ಭಾರತೀಯ ಜನತಾ ಪಾರ್ಟಿ (BJP) ಸೇರ್ಪಡೆಯಾಗಿದ್ದ ಬಂಗಾಳಿ ನಟಿ ಶ್ರಬಂತಿ ಚಟರ್ಜಿ ಇದೀಗ ಪಕ್ಷಕ್ಕೆ ವಿದಾಯ ಹೇಳಿದ್ದಾರೆ.

Srabanti Chatterjee
Srabanti Chatterjee
author img

By

Published : Nov 11, 2021, 3:03 PM IST

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ (West Bengal Assembly Polls) ಘೋಷಣೆಯಾಗುತ್ತಿದ್ದಂತೆ ಕಮಲ ಪಕ್ಷ ಸೇರ್ಪಡೆಯಾಗಿದ್ದ ನಟಿ ಶ್ರಬಂತಿ ಚಟರ್ಜಿ (Srabanti Chatterjee) ಇದೀಗ ಪಕ್ಷ ತೊರೆದಿದ್ದಾರೆ. ಇದೇ ವೇಳೆ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಪ್ರಗತಿಯತ್ತ ತೆಗೆದುಕೊಂಡು ಹೋಗುವಲ್ಲಿ ಭಾರತೀಯ ಜನತಾ ಪಾರ್ಟಿಯಲ್ಲಿ ಪ್ರಾಮಾಣಿಕತೆಯ ಕೊರತೆ ಇದೆ ಎಂದು ಆರೋಪಿಸಿರುವ ಶ್ರಬಂತಿ, ಇದೇ ಕಾರಣದಿಂದಾಗಿ ಪಕ್ಷ ತೊರೆಯುತ್ತಿರುವುದಾಗಿ ತಿಳಿಸಿದರು

ಈ ಕುರಿತು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್​ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆ ನಂತರ ಅವರು ಪಕ್ಷದಲ್ಲಿ ಇದ್ದಾರೋ, ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ಅವರು ಪಕ್ಷ ತೊರೆಯುತ್ತಿರುವುದರಿಂದ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಬೊಮ್ಮಾಯಿ; ಬಿಟ್ ಕಾಯಿನ್ ಹಗರಣದ ಕುರಿತು ನಮೋಗೆ ಮಾಹಿತಿ?

ಕಳೆದ ಮಾರ್ಚ್​ ತಿಂಗಳಲ್ಲಿ ಬಂಗಾಳಿ ಜನಪ್ರಿಯ​ ನಟಿ ಶ್ರಬಂತಿ ಚಟರ್ಜಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಕೈಲಾಶ್​ ವಿಜಯವರ್ಗೀಯಾ ನೇತೃತ್ವದಲ್ಲಿ ಕಮಲ ಮುಡಿದಿದ್ದರು. ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಟಿಎಂಸಿ ಅಭ್ಯರ್ಥಿ ವಿರುದ್ಧ ಹೀನಾಯ ಸೋಲು ಕಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.