ಕೋಲ್ಕತ್ತಾ: ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ದ ಬಂಗಾಳಿ ಹಿರಿಯ ನಟ ಸೌಮಿತ್ರಾ ಚಟರ್ಜಿ ವಿಧಿವಶರಾಗಿದ್ದಾರೆ.
85 ವರ್ಷದ ಸೌಮಿತ್ರಾ ಚಟರ್ಜಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಮತ್ತು ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ನಿನ್ನೆಯಷ್ಟೇ ಬೆಲ್ಲೆ ವ್ಯೂ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ಮುಖ್ಯಸ್ಥ ಅರಿಂದಂ ತಿಳಿಸಿದ್ದರು.
ಇಂದು ಚಿಕಿತ್ಸೆ ಫಲಕಾರಿಯಾಗದೆ ಸೌಮಿತ್ರಾ ಚಟರ್ಜಿಯವರು ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಚಟರ್ಜಿ ಅವರಿಗೆ ಇತ್ತೀಚೆಗೆ ಕೊರೋನಾ ಸೋಂಕು ಸಹ ದೃಢಪಟ್ಟಿತ್ತು.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾಗಿದ್ದ ಸೌಮಿತ್ರಾ ಚಟರ್ಜಿ ಹಲವಾರು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾದವರು.