ನವದೆಹಲಿ: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರತದಲ್ಲಿ 201 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ದೇಶದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 4.46 ಕೋಟಿಗೆ (4,46,76,879) ಏರಿಕೆಯಾಗಿದೆ. ಪ್ರಸ್ತುತ ಭಾರತದಲ್ಲಿ 3,397 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಸೋಂಕಿನ ದೈನಂದಿನ ದರವು 0.15 ಪ್ರತಿಶತದಷ್ಟಿದೆ. ಇಲ್ಲಿವರೆಗೂ 90.97 ಕೋಟಿ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ 1,36,315 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸೋಂಕಿನ ಒಟ್ಟು ಪ್ರಕರಣಗಳಲ್ಲಿ 0.01 ಪ್ರತಿ ಶತದಷ್ಟು ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.ಶೇ 98.80 ಪ್ರತಿಶತದಷ್ಟು ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇದುವರೆಗೂ 220.4 ಕೋಟಿ ಡೋಸ್‌ಗಳನ್ನು ನೀಡಲಾಗಿದೆ.
ಇದನ್ನು ಓದಿ: ಕೊರೋನಾ ಅಬ್ಬರ.. ಮಾಸ್ಕ ಕಡ್ಡಾಯ ಮತ್ತು ಟಿ 3 ಸೂತ್ರಕ್ಕೆ ಕೇಂದ್ರದ ಸೂಚನೆ