ಜೈಪುರ (ರಾಜಸ್ಥಾನ): ಮೊದಲ ಬಾರಿಗೆ ಶಾಸಕರಾಗಿ ಗೆದ್ದಿರುವ ಭಜನ್ ಲಾಲ್ ಶರ್ಮಾ ಅವರು ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಇಂದು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ತಮ್ಮ 57ನೇ ಹುಟ್ಟುಹಬ್ಬದ ದಿನವೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಭಜನ್ ಲಾಲ್ ಶರ್ಮಾ ರಾಜ್ಯದ 16ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಸಮಾರಂಭದ ಕೇಂದ್ರ ಬಿಂದುವಾಗಿ ಎಲ್ಲರ ಗಮನ ಸೆಳೆದಿದ್ದಾರೆ.
ಜೈಪುರದ ರಾಮ್ನಿವಾಸ್ ಭಾಗ್ನ ಅಲ್ಬರ್ಟ್ ಹಾಲ್ ಎದುರು ಆಯೋಜಿಸಿರುವ ಸಮಾರಂಭದಲ್ಲಿ ಭಜನ್ ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದರು. ದಿಯಾ ಕುಮಾರಿ ಹಾಗೂ ಪ್ರೇಮ್ ಚಂದ್ ಬೈರ್ವಾ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೂವರಿಗೂ ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸುಮಾರು 1 ಲಕ್ಷಕ್ಕೂ ಅಧಿಕ ಜನರು ನೂತನ ಸಿಎಂ ಹಾಗೂ ಡಿಸಿಎಂಗಳ ಪದಗ್ರಹಣಕ್ಕೆ ಸಾಕ್ಷಿಯಾಗಿದ್ದಾರೆ.
-
#WATCH | BJP leader Bhajanlal Sharma takes oath as the Chief Minister of Rajasthan, in the presence of PM Modi and Union Home Minister Amit Shah and other senior leaders, in Jaipur pic.twitter.com/XikKYL7T3w
— ANI (@ANI) December 15, 2023 " class="align-text-top noRightClick twitterSection" data="
">#WATCH | BJP leader Bhajanlal Sharma takes oath as the Chief Minister of Rajasthan, in the presence of PM Modi and Union Home Minister Amit Shah and other senior leaders, in Jaipur pic.twitter.com/XikKYL7T3w
— ANI (@ANI) December 15, 2023#WATCH | BJP leader Bhajanlal Sharma takes oath as the Chief Minister of Rajasthan, in the presence of PM Modi and Union Home Minister Amit Shah and other senior leaders, in Jaipur pic.twitter.com/XikKYL7T3w
— ANI (@ANI) December 15, 2023
ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ. ನಡ್ಡಾ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕಿ ವಸುಂಧರ ರಾಜೆ ಸೇರಿದಂತೆ ಹಲವಾರು ಕೇಂದ್ರ ಸಚಿವರು ಹಾಗೂ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ವಿಶೇಷವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಉಪಸ್ಥಿತಿ ಎಲ್ಲರ ಗಮನ ಸೆಳೆಯಿತು.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ಭಜನ್ ಲಾಲ್ ಶರ್ಮಾ ಜೈಪುರದ ಗೋವಿಂದ್ ದೇವ್ ದೇವಸ್ಥಾನದಲ್ಲಿ ಪೂಜೆ ಕೊಟ್ಟು, ಪ್ರಾರ್ಥನೆ ಸಲ್ಲಿಸಿ ಆಗಮಿಸಿದ್ದರು. ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢದಲ್ಲಿ ಬಹುಮತದೊಂದಿಗೆ ಅದ್ಭತ ಗೆಲುವು ಸಾಧಿಸಿತ್ತು. ಭಜನ್ ಲಾಲ್ ಶರ್ಮಾ ಅವರು ಮೊದಲ ಬಾರಿಗೆ ಸಂಗನೇರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಶರ್ಮಾ ಇದೀಗ ರಾಜ್ಯವನ್ನು ಪ್ರಗತಿಯತ್ತ ಮುನ್ನಡೆಸುವ ಚುಕ್ಕಾಣಿ ಹಿಡಿದಿದ್ದಾರೆ.
ಯಾರಿವರು ಭಜನ್‌ಲಾಲ್ ಶರ್ಮಾ: ಪೂರ್ವ ರಾಜಸ್ಥಾನದ ಭರತ್ಪುರ ಜಿಲ್ಲೆಯ ಅಟ್ಟರಿ ಎಂಬ ಪುಟ್ಟ ಗ್ರಾಮದ ನಿವಾಸಿಯಾಗಿರುವ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ರೈತ ಕುಟಂಬದಿಂದ ಬಂದವರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಶರ್ಮಾ ನೇರವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಬಡ್ತಿ ಪಡೆದವರು. ಇತ್ತೀಚೆಗೆ ನಡೆದು ವಿಧಾನಸಭಾ ಚುನಾವಣೆಯಲ್ಲಿ ಸಂಗನೇರ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಭಜನ್ ಲಾಲ್ ಶರ್ಮಾ 1,45,162 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಪುಷ್ಪೇಂದ್ರ ಭಾರದ್ವಾಜ್ ಅವರನ್ನು 48,000 ಮತಗಳಿಂದ ಸೋಲಿಸಿದ್ದರು. ಇತ್ತೀಚೆಗೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದಿದ್ದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಭಜನ್ ಲಾಲ್ ಶರ್ಮಾ ಹೆಸರನ್ನು ಪ್ರಸ್ತಾಪಿಸಿದಾಗ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಸಿಗೆ ಸೂಚಿಸಿದ್ದರು.
ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನಕ್ಕೂ ಮುನ್ನ ಭಜನ್‌ಲಾಲ್ ಶರ್ಮಾ ಪೂಜೆ, ಪ್ರಾರ್ಥನೆ