ETV Bharat / bharat

ಭಾರತ್​ ಬಂದ್​ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ.. ಕೇಂದ್ರದ ವಿರುದ್ಧ ವಾಕ್​ಪ್ರಹಾರ - ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್

ಇಂದಿನ ಭಾರತ ಬಂದ್​ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದು, ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.

ರಾಹುಲ್ ಗಾಂಧಿ
ರಾಹುಲ್ ಗಾಂಧಿ
author img

By

Published : Sep 27, 2021, 1:40 PM IST

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್​ ಬಂದ್​​ಗೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಬಲ ಸೂಚಿಸಿದ್ದಾರೆ. ರಾಹುಲ್ ಗಾಂಧಿ #IStandWithFarmers(ನಾನು ರೈತರ ಪರ ನಿಲ್ಲುತ್ತೇನೆ) ಎಂಬ ಹ್ಯಾಷ್​ಟ್ಯಾಗ್​ನಡಿ ಟ್ವೀಟ್ ಮಾಡಿದ್ದಾರೆ.

ರೈತರು ನಡೆಸುತ್ತಿರುವ ಅಹಿಂಸಾತ್ಮಕ ಸತ್ಯಾಗ್ರಹ ಇಂದೂ ಕೂಡ ಅಖಂಡವಾಗಿದೆ. ಆದರೆ, ಈ ಸರ್ಕಾರ ಅದನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಸರ್ಕಾರದ ಈ ಧೋರಣೆಯಿಂದಾಗಿಯೇ ಇಂದು ಭಾರತ್​ ಬಂದ್​ ನಡೆಸಬೇಕಾಯಿತು ಎಂದಿದ್ದಾರೆ.

ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳು ಒಂದು ವರ್ಷದಿಂದಲೂ ಪ್ರತಿಭಟನೆ ನಡೆಸುತ್ತಿವೆ. ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ 11 ಸುತ್ತುಗಳ ಮಾತುಕತೆ ನಡೆದಿದ್ದು, ವಿಫಲವಾಗಿವೆ. ಈ ನಿಟ್ಟಿನಲ್ಲಿ ಇಂದು 40 ರೈತ ಒಕ್ಕೂಟಗಳ ಸಂಘಟನೆಯಾಗಿರುವ ಸಂಯುಕ್ತ ಕಿಸಾನ್​ ಮೋರ್ಚಾ (SKM) ಇಂದು 6 ರಿಂದ 4ಗಂಟೆಯವರೆಗೆ ಭಾರತ್​ ಬಂದ್​ಗೆ ಕರೆ ನೀಡಿದೆ.

ಇದನ್ನೂ ಓದಿ: ಬಂದ್ ಎಫೆಕ್ಟ್​.. ದೆಹಲಿ - ನೋಯ್ಡಾ ಮಾರ್ಗದಲ್ಲಿ ವಾಹನ ಸಂಚಾರ ದಟ್ಟಣೆ, ಟ್ರಾಫಿಕ್​ ಜಾಮ್​: Video

ಕೃಷಿ ಕಾಯ್ದೆ ವಿಚಾರವಾಗಿ ಕಾಂಗ್ರೆಸ್ ಮೊದಲಿನಿಂದಲೂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಲೇ ಬಂದಿದೆ. ಇಂದು ನಡೆಯುತ್ತಿರುವ ಭಾರತ್​ ಬಂದ್​ಗೂ ನಮ್ಮ ಬೆಂಬಲ ಇರುವುದಾಗಿ ಹೇಳಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.