ETV Bharat / bharat

ಬೇಟೆಗಾಗಿ ಬಾಂಬ್ ತಯಾರಿಸುವಾಗ ಸ್ಫೋಟ: ಓರ್ವ ಸಾವು, ಇಬ್ಬರಿಗೆ ಗಾಯ - ಕಚ್ಚಾ ಬಾಂಬ್ ಸ್ಫೋಟಗೊಂಡು ಓರ್ವ ಸಾವು

ಕಚ್ಚಾ ಬಾಂಬ್ ತಯಾರಿಸುವಾಗ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

Odisha bomb making
ಕಚ್ಚಾ ಬಾಂಬ್ ತಯಾರಿಸುವಾಗ ಸ್ಫೋಟ
author img

By

Published : Oct 30, 2020, 7:33 AM IST

ಬೆರ್​ಹಾಂಪುರ್ (ಒಡಿಶಾ): ಗಂಜಾಂ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ತಯಾರಿಸುವಾಗ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆ. ಭೀಮ್‌ಪುರ ಗ್ರಾಮದ ಮನೆಯ ಮೇಲ್ಛಾವಣಿಯ ಮೇಲೆ ಮೂವರು ಬಾಂಬ್‌ಗಳನ್ನು ತಯಾರಿಸುತ್ತಿದ್ದಾಗ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಿಂದ ಎರಡು ಬಾಂಬ್ ಮತ್ತು ಸ್ಫೋಟಕದ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಅಸ್ಕಾ, ಸೂರ್ಯಮಣಿ ಪ್ರಧಾನ್ ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಕೆ. ಭೀಮ್‌ಪುರ ಗ್ರಾಮದ ಪ್ರಶಾಂತ್ ಮಲ್ಲಿಕ್ (33) ಎಂದು ಗುರುತಿಸಲಾಗಿದೆ. ಗಾಯಗೊಂಡವರು ಹತ್ತಿರದ ಬಾಟಾ ಸಶಾನ ಗ್ರಾಮಕ್ಕೆ ಸೇರಿದವರು. ಓರ್ವನನ್ನು ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದರೆ, ಇನ್ನೊಬ್ಬ ವ್ಯಕ್ತಿ ಶರಗಡದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮೀಪದ ಕಾಡಿನಲ್ಲಿ ಪ್ರಾಣಿಗಳನ್ನು, ವಿಶೇಷವಾಗಿ ಕಾಡು ಹಂದಿಗಳನ್ನು ಬೇಟೆಯಾಡಲು ವ್ಯಕ್ತಿಗಳು ಬಾಂಬ್‌ಗಳನ್ನು ತಯಾರಿಸುತ್ತಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್‌ಡಿಪಿಒ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.