ಲಖನೌ(ಯುಪಿ): ದೇಶಾದ್ಯಂತ ನಿತ್ಯ ಹೆಚ್ಚು ಜನರಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಎಲ್ಲ ರಾಜ್ಯದ ಜನರು ಬೆಚ್ಚಿ ಬಿದಿದ್ದಾರೆ. ಕಳೆದ 24 ಗಂಟೆಯಲ್ಲೇ 4 ಸಾವಿರಕ್ಕೂ ಅಧಿಕ ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಮತ್ತಷ್ಟು ಆತಂಕ ಮೂಡಿಸಿದೆ.
ಇದೀಗ ಉತ್ತರಪ್ರದೇಶದ ಹತ್ರಸ್ ಜಿಲ್ಲೆಯಲ್ಲಿ ಒಂದೇ ಕುಟುಂಬದ 10 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅಲ್ಲಿನ ಜನರಲ್ಲಿ ಬೆಚ್ಚಿ ಬೀಳುವಂತೆ ಮಾಡಿದೆ. ಹೀಗಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ತೆರಳಿ ವಾಪಸ್ ಬಂದಾಗ ಆತನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರ ಬೆನ್ನಲ್ಲೇ ನಾಲ್ವರು ಮಕ್ಕಳಿಗೂ ಈ ಸೋಂಕು ಕಾಣಿಸಿಕೊಂಡಿದ್ದು, ಅದು ಮನೆಯಲ್ಲಿನ ಮತ್ತೆ ಹಲವರಿಗೆ ಹರಡಿದೆ. ಹೀಗಾಗಿ ಒಂದೇ ಮನೆಯಲ್ಲಿ ವಾಸವಾಗಿದ್ದ 27 ಮಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಇದೇ ವಿಷಯದ ಬಗ್ಗೆ ಈಟವಿ ಭಾರತ್ ಜತೆ ಮುಖ್ಯ ವೈದ್ಯಾಧಿಕಾರಿ ಬ್ರಿಜೇಶ್ ರಾಥೋಡ್ ಮಾತನಾಡಿದ್ದು, ಫ್ಯಾಮಿಲಿ ಕ್ವಾರಂಟೈನ್ ಗೈಡ್ಲೈನ್ಸ್ ಮುರಿದ ಕಾರಣ ಅವರಲ್ಲಿ ಕೊರೊನಾ ಕಾಣಿಸಿಕೊಂಡಿದೆ ಎಂದಿದ್ದಾರೆ. ಉತ್ತರಪ್ರದೇಶದಲ್ಲಿ 3,467 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈಗಾಗಲೇ 70 ಮಂದಿ ಸಾವನ್ನಪ್ಪಿದ್ದಾರೆ.