ಬಿಕನೇರ್(ರಾಜಸ್ಥಾನ) : ಬಸ್ ಮತ್ತೆ ಟ್ರಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 10 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 11ರ ಶ್ರೀ ದುಂಗರಘರ್ನಲ್ಲಿ ಅಪಘಾತ ನಡೆದಿದ್ದು 20ರಿಂದ 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈವರೆಗೆ 9 ಜನರ ಮೃತದೇಹಗಳನ್ನು ಸ್ಥಳೀಯ ಪಿಬಿಎಂ ಆಸ್ಪತ್ರೆಗೆ ಶವ ಪರೀಕ್ಷೆಗೆ ಕೊಂಡೊಯ್ಯಲಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದೆ.