ETV Bharat / bharat

ಮಹತ್ವದ ಬೆಳವಣಿಗೆ: ಜಮ್ಮುಕಾಶ್ಮೀರದಿಂದ 12 ಸಾವಿರ ಸೈನಿಕರ ಹಿಂಪಡೆದ ಕೇಂದ್ರ!

ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಹೆಚ್ಚಿನ ಪ್ರಮಾಣದಲ್ಲಿ ಅಲ್ಲಿ ಯೋಧರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

CAPF troops
CAPF troops
author img

By

Published : Aug 19, 2020, 8:17 PM IST

Updated : Aug 20, 2020, 9:06 AM IST

ನವದೆಹಲಿ: ವಿಶೇಷ ಸಾಂವಿಧಾನಿಕ ಸ್ಥಾನಮಾನ​ ರದ್ದುಗೊಳಿಸಿದ ಬಳಿಕ ಕೇಂದ್ರಾಡಳಿತ ಪ್ರದೇಶ ಜಮ್ಮುಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ಸೈನಿಕರ ನಿಯೋಜನೆ ಮಾಡಲಾಗಿತ್ತು. ಆದರೆ ಇದೀಗ ಮಹತ್ವದ ಬೆಳವಣಿಗೆಯೊಂದರಲ್ಲಿ ಬರೋಬ್ಬರಿ 12 ಸಾವಿರ ಸೈನಿಕರನ್ನು ಹಿಂಪಡೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರ ಗೃಹ ಸಚಿವಾಲಯ ಈ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ಸೈನಿಕರನ್ನು ಹಿಂಡೆದುಕೊಳ್ಳುವುದಾಗಿ ಘೋಷಿಸಿದೆ. ಭಾರತೀಯ ಸೇನೆ, ಅರೆಸೇನಾ ಪಡೆ, ಸಶಸ್ತ್ರ ಸೀಮಾ ಬಲ ಹಾಗೂ ಸಿಎಪಿಎಫ್​​ನ ಅನೇಕ ಭದ್ರತಾ ಸಿಬ್ಬಂದಿಯನ್ನು ಜಮ್ಮು-ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಜಮಾವಣೆ ಮಾಡಲಾಗಿತು.

ಇದೀಗ ಸಿಎಪಿಎಫ್‌ನ 40, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯ 20, ಗಡಿ ಭದ್ರತಾ ಪಡೆ(ಬಿಎಸ್‌ಎಫ್‌)ಯ 20 ಹಾಗೂ ಸಶಸ್ತ್ರ ಸೀಮಾ ಬಲದ 20 ತುಕಡಿಗಳನ್ನು ಕಣಿವೆಯಿಂದ ವಾಪಸ್​ ಕರೆಯಿಸಿಕೊಳ್ಳುವುದಾಗಿ ತಿಳಿಸಿದೆ.

ರಾಜ್ಯದ ಪರಿಸ್ಥಿತಿ ಸದ್ಯ ಶಾಂತಿಯುತವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Last Updated : Aug 20, 2020, 9:06 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.